ಬೆಂಗಳೂರು: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 41 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಅವಶ್ಯಕ. ಕನ್ನಡವನ್ನು ಸ್ಪಷ್ಟವಾಗಿ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ವಿಧಾನ: ಮೆರಿಟ್ ಆಧಾರದ ಮೇಲೆ ಆಯ್ಕೆ. ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಮೇ 3ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 3 ಕಡೇಯ ದಿನ. ಈ ಕುರಿತು ಹೆಚ್ಚಿನ ಮಾಹಿತಿಗೆ mandya.dcourts.gov.in ಇಲ್ಲಿಗೆ ಭೇಟಿ ನೀಡಿ.
ಅಂಚೆ ಕಚೇರಿಯಲ್ಲಿ ಚಾಲಕರ ಹುದ್ದೆ: ಭಾರತೀಯ ಅಂಚೆ ಕಚೇರಿ ಕರ್ನಾಟಕದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 27 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕನಿಷ್ಠ 18 ಮತ್ತು ಗರಿಷ್ಠ 27. ಪ.ಜಾ, ಪ.ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಈ ಹುದ್ದೆಗೆ ಅಭ್ಯರ್ಥಿಗಳು ಅಧಿಸೂಚನೆಯ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಿ, ದಿ ಮ್ಯಾನೇಜರ್, ಮೇಲ್ ಮೋಟರ್ ಸರ್ವೀಸ್ ಬೆಂಗಳೂರು- 560001 ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 14. ಈ ಕುರಿತ ಹೆಚ್ಚಿನ ಮಾಹಿತಿಗೆ indiapost.govt.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಕೆಪಿಎಸ್ಸಿ ನೇಮಕಾತಿ: ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ