ETV Bharat / education-and-career

ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್​ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ - Mock Seat Allotment Results - MOCK SEAT ALLOTMENT RESULTS

ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್​ಗಳ ಅಣುಕು ಸೀಟು ಹಂಚಿಕೆ ಫಲಿತಾಂಶವು ಪ್ರಕಟಗೊಂಡಿದೆ.

engineering course
ಕೆಇಎ (ETV Bharat)
author img

By ETV Bharat Karnataka Team

Published : Aug 25, 2024, 6:54 PM IST

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಅಣಕು ಸೀಟು‌ ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಸಂಜೆ ಪ್ರಕಟಿಸಿದೆ.

ಕೆಇಎ ವೆಬ್​ಸೈಟ್​​ನಲ್ಲಿ ಅಣಕು ಫಲಿತಾಂಶ ಲಭ್ಯ‌ವಿದೆ. ಅದನ್ನು ನೋಡಿದ ನಂತರ ಅಗತ್ಯವಿದ್ದರೆ ಆಗಸ್ಟ್ 27ರ ಬೆಳಗ್ಗೆ 11 ಗಂಟೆ ವರೆಗೆ ಅಭ್ಯರ್ಥಿಗಳು ತಮ್ಮ‌ ಇಚ್ಛೆಯನುಸಾರ ಕಾಲೇಜು/ಕೋರ್ಸ್​​ಗಳನ್ನು ಬದಲಿಸಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು. ಆಗಸ್ಟ್ 22ರ ಸಂಜೆ 5 ಗಂಟೆವರೆಗೆ ಆದ್ಯತಾ ಕ್ರಮದಲ್ಲಿ ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ, ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಅನುಸಾರ ಅಣಕು ಸೀಟು ಹಂಚಿಕೆ ಮಾಡಲಾಗಿದೆ ಎಂದು ನಿರ್ದೇಶಕರು ವಿವರಿಸಿದ್ದಾರೆ.

ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ ಇತ್ಯಾದಿ ಕೋರ್ಸುಗಳ ಸೀಟು ಹಂಚಿಕೆಯನ್ನು ಮಾಡಲಾಗಿದೆ. ಇಲ್ಲಿಯವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಇಷ್ಟವಿದ್ದಲ್ಲಿ ಆಗಸ್ಟ್ 27ರ ಬೆಳಗ್ಗೆ 11 ಗಂಟೆಯೊಳಗೆ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಕಾಲೇಜು ಮತ್ತು ಕೋರ್ಸ್​​ಗಳ ಆಯ್ಕೆಗಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಅಭ್ಯರ್ಥಿಗಳು ಕೇಳಬಹುದಾದ ಪುನರಾವರ್ತಿತ ಪ್ರಶ್ನೆಗಳನ್ನು ಕ್ರೋಢೀಕರಿಸಿ ಪ್ರಾಧಿಕಾರದ ವೆಬ್‌ಸೈಟ್​​​ನಲ್ಲಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು ಎಂದು ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಇದನ್ನೂ ಓದಿ: RRB ನೇಮಕಾತಿ: 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿಗೆ ಆಹ್ವಾನ - Railway Recruitment Board

ETV Bharat Logo

Copyright © 2025 Ushodaya Enterprises Pvt. Ltd., All Rights Reserved.