ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗ್ರೂಪ್ ಸಿ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹುದ್ದೆ ವಿವರ: ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಲ್ಲಿ ಆರು ಹುದ್ದೆಗಳನ್ನು ಹೈದರಾಬಾದ್ - ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಆಟೋ ಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಬಿಟೆಕ್ ಅಥವಾ ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.
ವೇತನ: 33450 - 62600 ರೂ ಮಾಸಿಕ
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ. ಪ. ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಕಲ ಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ, ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ
ಈ ಹುದ್ದೆಗೆ ಅಭ್ಯರ್ಥಿಗಳು ಏಪ್ರಿಲ್ 22ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಆನ್ಲೈನ್ ಅರ್ಜಿ ಶುಲ್ಕ ಪಾವತಿಗೆ ಅಂತಿಮ ದಿನಾಂಕ ಮೇ 21 ಆಗಿದೆ.
ಭೂ ಮಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆ: 364 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ ಅಥವಾ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಅಥವಾ ಲ್ಯಾಂಡ್ ಅಂಡ್ ಸಿಟಿ ಸರ್ವೆ ಪದವಿ ಪೂರ್ವ ಡಿಪ್ಲೊಮಾ ಅಥವಾ ಐಟಿಐ ಇನ್ ಸರ್ವೆ ಟ್ರೇಡ್ನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಗರಿಷ್ಠ ವಯೋಮಿತಿ 35 ವರ್ಷ ಆಗಿದ್ದು, ಪ. ಜಾ ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಕಲ ಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಮಾರ್ಚ್ 11ರಿಂದ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಕಡೆಯ ದಿನ ಏಪ್ರಿಲ್ 10 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ kpsc.kar.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಇಂದೇ ಅಪ್ಲೈ ಮಾಡಿ: ಕೋಲಾರ ಜಿಲ್ಲೆಯಲ್ಲಿದೆ 513 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆ