ETV Bharat / education-and-career

ನಬಾರ್ಡ್​​ ಆಫೀಸ್​ ಅಟೆಂಡೆಂಟ್​ ಹುದ್ದೆ; ಎಸ್​ಎಸ್​ಎಲ್​ಸಿ​ ಆದವರಿಗೆ ಅವಕಾಶ - Nabard Recruitment notification - NABARD RECRUITMENT NOTIFICATION

ಈ ಹುದ್ದೆಗೆ ಅಕ್ಟೋಬರ್​ 2ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಗೆ ಅಕ್ಟೋಬರ್​ 21 ಆಗಿದೆ.

Office Attendant job Notification By Nabard
ಉದ್ಯೋಗ ಮಾಹಿತಿ (ಈಟಿವಿ ಭಾರತ್​​)
author img

By ETV Bharat Karnataka Team

Published : Oct 3, 2024, 2:21 PM IST

ಬೆಂಗಳೂರು: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್​ (ನಬಾರ್ಡ್​)ನಲ್ಲಿ ಆಫೀಸ್​ ಅಸಿಸ್ಟೆಂಟ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರತದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಕರ್ನಾಟಕಕ್ಕೆ 8 ಹುದ್ದೆಗಳನ್ನು ನೀಡಲಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಒಟ್ಟು 108 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕರ್ನಾಟಕಕ್ಕೆ 8 ಸ್ಥಾನ ನೀಡಲಾಗಿದ್ದು. 6 ಬೆಂಗಳೂರು ಮತ್ತು 2 ಹುದ್ದೆಗಳು ಮಂಗಳೂರಿನಲ್ಲಿವೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಪಾಸ್​ ಆಗಿರಬೇಕು.

ವೇತನ: ಈ ಹುದ್ದೆಗಳಿಗೆ ಮಾಸಿಕ 35ಸಾವಿರ ರೂ ವೇತನ ನಿಗದಿಸಲಾಗಿದೆ.

Office Attendant job Notification By Nabard
ಅಧಿಸೂಚನೆ (ನಬಾರ್ಡ್​​)

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ದಾಟಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಿರಬೇಕು.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 50 ರೂ ಹಾಗೂ ಇತರ ಅಭ್ಯರ್ಥಿಗಳಿಗೆ 500 ರೂ ಅರ್ಜಿ ನಿಗದಿ ಪಡಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ಭಾಷಾ ಸಾಮರ್ಥ್ಯ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಕ್ಟೋಬರ್​ 2ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಗೆ ಅಕ್ಟೋಬರ್​ 21 ಆಗಿದೆ. ಈ ಹುದ್ದೆಗೆ ನವೆಂಬರ್​ 21ರಂದು ಪರೀಕ್ಷೆಗಳು ನಡೆಯಲಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು nabard.orgಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ 412, ಕೊಪ್ಪಳದಲ್ಲಿ 461 ಅಂಗನವಾಡಿ ಉದ್ಯೋಗ; ಅಧಿಸೂಚನೆ ಪ್ರಕಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.