ಬೆಂಗಳೂರು: ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯಿಂದ 97 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಫೀಸರ್ ಗ್ರೇಡ್ 'ಎ' ಸಹಾಯಕ ಮ್ಯಾನೇಜರ್ ಹುದ್ದೆಗಳು ಇವಾಗಿವೆ. ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಒಟ್ಟು 97 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ಜನರಲ್ - 62
- ಲೀಗಲ್ - 5
- ಮಾಹಿತಿ ತಂತ್ರಜ್ಞಾನ -24
- ಇಂಜಿನಿಯರಿಂಗ್ (ಎಲೆಕ್ಟ್ರಿಕಲ್) -2
- ಸಂಶೋಧನೆ -2
- ಅಧಿಕೃತ ಭಾಷೆ - 2
ವಿದ್ಯಾರ್ಹತೆ: ಜನರಲ್ ಹುದ್ದೆಗೆ ಕಾನೂನು ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯಾಗಿರಬೇಕು. ಲೀಗಲ್ ಪದವಿಗೆ ಕಾನೂನು ಪದವಿ, ಮಾಹಿತಿ ತಂತ್ರಜ್ಞಾನ ಹುದ್ದೆಗೆ ಇಂಜಿನಿಯರಿಂಗ್ ಪದವಿ, ಇಂಜಿನಿಯರಿಂಗ್ (ಎಲೆಕ್ಟ್ರಿಕಲ್) ಹುದ್ದೆಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ, ಸಂಶೋಧನೆ ಹಾಗೂ ಅಧಿಕೃತ ಭಾಷೆ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 30 ವರ್ಷ ಆಗಿದೆ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಶೇಷಚೇತನ ಅಭ್ಯರ್ಥಿಗಳಿಗೆ 100 ಮತ್ತು ಒಬಿಸಿ, ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಜೂನ್ 11ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 30 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sebi.gov.in ಭೇಟಿ ನೀಡಿ.
ರಾಷ್ಟ್ರೀಯ ರಸಗೊಬ್ಬರ ಇಲಾಖೆ (ಎನ್ಎಫ್ಎಲ್)ನಲ್ಲಿದೆ ಉದ್ಯೋಗವಕಾಶ;
ಕೇಂದ್ರ ಸರ್ಕಾರದ ರಸಗೊಬ್ಬರ ಸಚಿವಾಲಯದಡಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಇರುವ ಇಂಜಿನಿಯರ್, ಹಿರಿಯ ರಾಸಾಯನಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 97 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಬಿಎಸ್ಸಿ, ಇಂಜಿನಿಯರಿಂಗ್ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 30 ಆಗಿದ್ದು, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 700 ರೂ. ಅರ್ಜಿ ಶುಲ್ಕ ವಿಧಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಜೂನ್ 11ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 1 ಆಗಿದೆ. ಈ ಕುರಿತು ಅಧಿಕೃತ ಅಧಿಸೂಚನೆಗೆ nationalfertilizers.com ಭೇಟಿ ನೀಡಿ.
ಇದನ್ನೂ ಓದಿ: ಕೆಇಎ ನೇಮಕಾತಿ; ಜಿಟಿಟಿಸಿಯಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ