ಬೆಂಗಳೂರು: ಚಿತ್ರದುರ್ಗ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೇ ಪೌರ ಕಾರ್ಮಿಕರಾಗಿ ನೇಮಕಾತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹುದ್ದೆ ವಿವರ: ಒಟ್ಟು 26 ಪೌರ ಕಾರ್ಮಿಕರ ನೇರ ನೇಮಕಾತಿ
ಎಲ್ಲಿ ಎಷ್ಟು ಹುದ್ದೆ:
- ಚಿತ್ರದುರ್ಗ ನಗರಸಭೆ - 8
- ಹಿರಿಯೂರು ನಗರಸಭೆ - 6
- ಹೊಸದುರ್ಗ ಪುರಸಭೆ - 3
- ಹೊಳಲ್ಕೆರೆ ಪುರಸಭೆ - 3
- ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ - 3
- ನಾಯಕನಹಟ್ಟಿ ಪಟ್ಟಣ ಪಂಚಾಯಿತಿ - 3
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು.
ವೇತನ: ಮಾಸಿಕ 27,000 ದಿಂದ 46,675 ರೂ ವರೆಗೆ
ಅರ್ಜಿ ಸಲ್ಲಿಕೆ: ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಸುವ ವಿಳಾಸ: ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ.
ಈ ಹುದ್ದೆಗೆ ನವೆಂಬರ್ 6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಡಿಸೆಂಬರ್ 5 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಜಿಲ್ಲಾಡಳಿತ ವೆಬ್ಸೈಟ್ chitradurga.nic.in ಭೇಟಿ ನೀಡಿ.
ಇದನ್ನೂ ಓದಿ: UPSC ನೇಮಕಾತಿ: ಸಹಾಯಕ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ