ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಕ್ರಮ ನಡೆಸಲಾಗಿದೆ. ಅದರ ಅನುಸಾರವಾಗಿ ವಿಜಯಪುರ ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿರುವ 93 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದೇ ಕೆಲಸ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 93 ಪೌರ ಕಾರ್ಮಿಕ ಹುದ್ದೆಗೆ ಭರ್ತಿಗೆ ಕ್ರಮ.
ಅರ್ಹತೆ: ಈ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಬರಬೇಕು. ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸಬೇಕು.
ವೇತನ: 17,000-28,950 ರೂ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
ಆಯ್ಕೆ: ಮೆರಿಟ್ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಈಗಾಗಲೇ ಹಾಲಿ, ದಿನಗೂಲಿ, ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯ ನಿರ್ವಹಿಸುವವರಿಗೆ ಮೊದಲ ಅದ್ಯತೆ
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ವಿಜಯಪುರ ಮಹಾನಗರ ಪಾಲಿಕೆ ವೆಬ್ಸೈಟ್ನಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ವಿಜಯಪುರ ಮಹಾನಗರ ಪಾಲಿಕೆ, ಬಾಗಲಕೋಟೆ ರಸ್ತೆ, ಜಲನಗರ - 586109
ಈ ಹುದ್ದೆಗೆ ಫೆಬ್ರವರಿ 5 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್ 5 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು vijayapuracity.mrc.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿದೆ ಉದ್ಯೋಗ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಒಟ್ಟು 6 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ರಾಜ್ಯ ಯೋಜನಾ ಸಂಯೋಜಕರು - ಸಮಾಜ ವಿಜ್ಞಾನ, ಜೀವ ವಿಜ್ಞಾನ, ಸೋಷಿಯಲ್ ವರ್ಕ್, ರೂರಲ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ. ಮೂರು ವರ್ಷ ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಯಲ್ಲಿ ನಿರ್ದಿಷ್ಟ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 24 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 8 ಕಡೇಯ ದಿನ. ಅಧಿಕೃತ ಅಧಿಸೂಚನೆ, ನಿಗದಿತ ಅರ್ಜಿ ಪಡೆಯಲು ಅಭ್ಯರ್ಥಿಗಳು dwcd.karnataka.gov.in ಭೇಟಿ ನೀಡಬಹುದು.
ಇದನ್ನೂ ಓದಿ: ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನ