ETV Bharat / education-and-career

ಮೈಸೂರು ಮಹಾನಗರ ಪಾಲಿಕೆ ನೇಮಕಾತಿ: 252 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ - Pourakarmika Jobs - POURAKARMIKA JOBS

ಪೌರ ಕಾರ್ಮಿಕ ಹುದ್ದೆ ಬಯಸುವ ಅಭ್ಯರ್ಥಿಗಳು ಜುಲೈ 17​ರವರೆಗೆ ಅರ್ಜಿ ಸಲ್ಲಿಸಬಹುದು.

252 Pourakarmika job recruitment from mysore city corporation
ಮೈಸೂರು ಮಹಾನಗರ ಪಾಲಿಕೆ (ಸಂಗ್ರಹ ಚಿತ್ರ)
author img

By ETV Bharat Karnataka Team

Published : Jun 19, 2024, 3:58 PM IST

ಬೆಂಗಳೂರು: ಕರ್ನಾಟಕ ಮಹಾನಗರ ಪಾಲಿಕೆ ನಿಯಮದಂತೆ ಮೈಸೂರು ಮಹಾನಗರ ಪಾಲಿಕೆಗೆ ಮಂಜೂರಾಗಿರುವ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 252 ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಮಹಾನಗರ ಪಾಲಿಕೆಯಲ್ಲಿ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದೇ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರು ಅರ್ಜಿ ಸಲ್ಲಿಸಬಹುದು.

ಅರ್ಹತೆ: ಶೈಕ್ಷಣಿಕ ವಿದ್ಯಾರ್ಹತೆಯ ಅಗತ್ಯವಿಲ್ಲ. ಕನ್ನಡ ಮಾತನಾಡಲು ಬರಬೇಕು. ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದಡಿ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸಿರಬೇಕು.

ವಯೋಮಿತಿ: 55 ವರ್ಷ ವಯೋಮಿತಿ ಮೀರಿರಬಾರದು.

ಆಯ್ಕೆ: ಈಗಾಗಲೇ ಹಾಲಿ, ದಿನಗೂಲಿ, ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯ ನಿರ್ವಹಿಸುವವರಿಗೆ ಮೊದಲ ಅದ್ಯತೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ನಿಗದಿತ ಅರ್ಜಿ ಪಡೆದು, ಭರ್ತಿ ಮಾಡಿ, ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಸಲ್ಲಿಸಬೇಕು.

252 Pourakarmika job recruitment from mysore city corporation
ಅಧಿಸೂಚನೆ (ಮೈಸೂರು ಮಹಾನಗರ ಪಾಲಿಕೆ)

ಅರ್ಜಿ ನಮೂನೆ ಪಡೆಯುವ ಸ್ಥಳ: ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಸಯ್ಯಾಜಿರಾವ್​ ರಸ್ತೆ, ಮೈಸೂರು-570004

ಜೂನ್​ 18ರಿಂದ ನಿಗದಿತ ಅರ್ಜಿಯನ್ನು ಮೇಲಿನ ವಿಳಾಸದಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಜುಲೈ 17.

ಈ ಕುರಿತ ಹೆಚ್ಚಿನ ಮಾಹಿತಿಯನ್ನು mysurucity.mrc.gov.in ಅಥವಾ ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪಡೆಯಬಹುದು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನರ್ಸ್​ ಹುದ್ದೆ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನರ್ಸ್​ 14, ಕಿರಿಯ ಪ್ರಯೋಗಾಲಯ ತಂತ್ರಜ್ಞರು 4, ಫಾರ್ಮಸಿಸ್ಟ್​ 1​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನರ್ಸ್​ ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್​, ಕಿರಿಯ ಪ್ರಯೋಗಾಲಯ ತಂತ್ರಜ್ಞ ಹುದ್ದೆಗೆ ಡಿಪ್ಲೊಮಾ, ಲ್ಯಾಬ್​​ ಟೆಕ್ನಿಷಿಯನ್​ನಲ್ಲಿ ಬಿಎಸ್ಸಿ, ಫಾರ್ಮಸಿಸ್ಟ್​ ಹುದ್ದೆಗೆ ಡಿ ಫಾರ್ಮ್​, ಬಿಫಾರ್ಮ್​ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷದ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಗರಿಷ್ಠ ವಯೋಮಿತಿ 45 ವರ್ಷ. ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ವಿಳಾಸ: ಜಿಲ್ಲಾ ಆಸ್ಪತ್ರೆ ಕಚೇರಿ, ಚಿತ್ರದುರ್ಗ.

ಜೂನ್​ 5 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೇಯ ದಿನ ಜೂನ್​ 21. ಈ ಕುರಿತ ಹೆಚ್ಚಿನ ಮಾಹಿತಿಗೆ chitradurga.nic.in ಭೇಟಿ ನೀಡಿ.

ಇದನ್ನೂ ಓದಿ: ಪಿಯುಸಿ, ಡಿಪ್ಲೊಮಾ ಅರ್ಹತೆ; ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ 320 ನಾವಿಕ್, ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.