ಬೆಂಗಳೂರು: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ (ಪಿಎನ್ಬಿ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1025 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಪಿಎನ್ಬಿಯಲ್ಲಿರುವ ಹುದ್ದೆಗಳ ಮಾಹಿತಿ ಹೀಗಿದೆ
ಕ್ರೆಡಿಟ್ ಆಫೀಸರ್ -1000
ಫೊರೆಕ್ಸ್ ಮ್ಯಾನೇಜರ್ - 15
ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ - 5
ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್ - 5
ವಿದ್ಯಾರ್ಹತೆ: ಕ್ರೆಡಿಟ್ ಆಫೀಸರ್ ಮತ್ತು ಫೊರೆಕ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಿಎ ಅಥವಾ ಐಸಿಡಬ್ಲ್ಯೂಎ, ಎಂಬಿಎ ಪದವಿಯನ್ನು ಹೊಂದಿರಬೇಕು. ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ ಮತ್ತು ಸೈಬರ್ ಸೆಕ್ಯೂಟಿರಿ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್ ಎಂಸಿಎ ಪದವಿಯನ್ನು ಪಡೆದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21ರಿಂದ 38 ವರ್ಷದ ವಯೋಮಾನ ಹೊಂದಿರಬೇಕು. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ನಿವೃತ್ತ ಸೇವಾಧಿಕಾರಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷ ಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 59 ರೂ. ಅರ್ಜಿ ಶುಲ್ಕ ನಿಗದಿಸಿದ್ದರೆ, ಇತರೆ ಅಭ್ಯರ್ಥಿಗಳು 1180 ರೂ. ಅರ್ಜಿ ಶುಲ್ಕ ಭರಿಸಬೇಕಿದೆ. ಆನ್ಲೈನ್ ಮೂಲಕವೇ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಫೆಬ್ರವರಿ 7ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 25 ಆಗಿದೆ. ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಈ ಹುದ್ದೆಗಳಿಗೆ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು ಮತ್ತು ಹುಬ್ಬಳ್ಳಿ- ಧಾರವಾಡದ ಕೇಂದ್ರದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರ ವಿವರಗಳಿಗೆ pnbindia.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ಕ್ಲರಿಕಲ್ ಹುದ್ದೆ ನೇಮಕಾತಿ