ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹಿಂದೆ 9144 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಪರಿಷ್ಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಬೆಂಗಳೂರು ವಲಯಕ್ಕೆ 337 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ಹುದ್ದೆ ವಿವರ:
ಟೆಕ್ನಿಶಿಯನ್ ಗ್ರೇಡ್ 1 ಸಿಗ್ನಲ್ (ಓಪನ್ ಲೈನ್) - 1092
ಟೆಕ್ನಿಶಿಯನ್ ಗ್ರೇಡ್ 3 (ಓಪನ್ ಲೈನ್) -8052
ಟೆಕ್ನಿಶಿಯನ್ ಗ್ರೇಡ್ 3 (ವರ್ಕ್ಶಾಪ್ ಮತ್ತು ಪಿಯು) - 5154
ವಿದ್ಯಾರ್ಹತೆ: ಟೆಕ್ನಿಶಿಯನ್ ಗ್ರೇ 1 ಸಿಗ್ನಲ್ ಹುದ್ದೆಗೆ ಅಭ್ಯರ್ಥಿಗಳು ಡಿಪ್ಲೊಮಾ, ಬಿಎಸ್ಸಿ, ಬಿಇ, ಬಿಟೆಕ್, ಟೆಕ್ನಿಶಿಯನ್ 3 ಹುದ್ದೆಗೆ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 36 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳು 3 ವರ್ಷ ಮತ್ತು ಪ.ಜಾ ಹಾಗೂ ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಮಹಿಳಾ, ವಿಕಲಚೇತನ ಅಭ್ಯರ್ಥಿಗಳಿಗೆ 250 ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಇದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.
ಈ ಹುದ್ದೆಗೆ ಆಗಸ್ಟ್ 22ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 6 ಆಗಿದೆ.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು indianrailways.gov.in ಭೇಟಿ ನೀಡಬಹುದಾಗಿದೆ.
HAL ನಲ್ಲಿ166 ಟೆಕ್ನಿಶಿಯನ್ ಹುದ್ದೆ: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ 166 ಟೆಕ್ನಿಶಿಯನ್ ಹುದ್ದೆಗಳ ಅಧಿಸೂಚನೆ ಪ್ರಕಟಿಸಲಾಗಿದೆ. ಡಿಪ್ಲೊಮಾ ಟೆಕ್ನಿಶಿಯನ್ 43, ಟೆಕ್ನಿಶಿಯನ್ 123 ಹುದ್ದೆಗಳಿವೆ. ಡಿಪ್ಲೊಮಾ ಟೆಕ್ನಿಶಿಯನ್ ಹುದ್ದೆಗೆ ಡಿಪ್ಲೊಮಾ ಮತ್ತು ಟೆಕ್ನಿಶಿಯನ್ ಹುದ್ದೆಗೆ ಐಟಿಐ ಶಿಕ್ಷಣ ಹೊಂದಿರಬೇಕು.
ವಯೋಮಿತಿ: ಗರಿಷ್ಠ ವಯೋಮಿತಿ 28 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಡಿಪ್ಲೊಮಾ ಟೆಕ್ನಿಶಿಯನ್ ಹುದ್ದೆಗೆ 46,764 ರೂ ಮತ್ತು ಟೆಕ್ನಿಶಿಯನ್ ಹುದ್ದೆಗೆ 44,796 ರೂ. ಮಾಸಿಕ ವೇತನವಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಗಸ್ಟ್ 14ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಆಗಸ್ಟ್ 28.
ಈ ಕುರಿತ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು hal-india.co.in ಭೇಟಿ ನೀಡಬಹುದು.
ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! ಆಗಸ್ಟ್ 28ರಂದು ಹುಬ್ಬಳ್ಳಿಯಲ್ಲಿ ಉದ್ಯೋಗ ಮೇಳ