ಶಿವಮೊಗ್ಗ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: ಜಿಲ್ಲಾ ಸಲಹೆಗಾರರು 01 ಹುದ್ದೆ
ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿಎಸ್‌ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಪ್ರಾಶಸ್ತ್ಯ ಕೊಡಲಾಗುವುದು.
ವಯೋಮಿತಿ: ಈ ಹುದ್ದೆಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ, ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ವಿಶೇಷ ಸೂಚನೆ: ಈ ಹುದ್ದೆಗೆ ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿಂದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.
ಈ ಹುದ್ದೆಯನ್ನು ಆರು ತಿಂಗಳ ಅವಧಿಗೆ ಅಂದರೆ 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿದೆ.
ಈ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಇಲಾಖೆಯಲ್ಲಿ ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿ, ಅದರೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರ ಕಚೇರಿ ಓ. ಟಿ. ರಸ್ತೆ ಶಿವಮೊಗ್ಗ ಇಲ್ಲಿಗೆ ಅಂಚೆ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ನ. 5 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಕೃಷಿ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿದೆ ಉದ್ಯೋಗಾವಕಾಶ; ಗುತ್ತಿಗೆ ಆಧಾರದ ಮೇಲೆ ನೇಮಕಾತಿ