ಬೆಂಗಳೂರು: ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 4,232 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಧ್ಯಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಮೂರು ವರ್ಷಗಳ ಗುತ್ತಿಗೆ ಅವಧಿಗೆ ಮಾಸಿಕ ಗೌರವಧನದ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ನಡೆಯಲಿದೆ.
ಹುದ್ದೆಗಳು: 4232 ಎಲೆಕ್ಟ್ರಿಶಿಯನ್ ಮತ್ತು ಫಿಟ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಕರ್ನಾಟಕದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ಭಾಲ್ಕಿ, ರಾಯಚೂರು., ಯಾದಗಿರಿ ಮತ್ತು ಬಳ್ಳಾರಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು 10ನೇ ತರಗತಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 15 ವರ್ಷ ಗರಿಷ್ಠ ವಯೋಮಿತಿ 24 ವರ್ಷವಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿ, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ವಿಧಿಸಲಾಗಿದೆ.
ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಡಿಸೆಂಬರ್ 28 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜನವರಿ 27 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು scr.indianrailways.gov.in ಭೇಟಿ ನೀಡಿ.