ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು (SSC) 8,326 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಟಿಎಸ್ (ತಾಂತ್ರಿಕೇತರ) ಮತ್ತು ಹವಾಲ್ದಾರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ (ತಾಂತ್ರಿಕೇತರ) - 4,887
ಸಿಬಿಐಸಿ ಮತ್ತು ಸಿಬಿಎನ್ನಲ್ಲಿ ಹವಾಲ್ದಾರ್ - 3,439
ವಿದ್ಯಾರ್ಹತೆ: ಅಧಿಕೃತ ಮಂಡಳಿಯಿಂದ ಎಸ್ಎಸ್ಎಲ್ಸಿ ಅಥವಾ ಪಿಯುಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಎಂಟಿಎಸ್ ಹುದ್ದೆಗೆ ಗರಿಷ್ಠ 25 ವರ್ಷ, ಹವಾಲ್ದಾರ್ ಹುದ್ದೆಗೆ ಗರಿಷ್ಠ 27 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ, ವಿಶೇಷಚೇತನ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಭರಿಸಬೇಕಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಮೂಲಕ ಆಯ್ಕೆ.
ಅಭ್ಯರ್ಥಿಗಳು ಜೂನ್ 27ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 31 ಕಡೇಯ ದಿನ. ನವೆಂಬರ್ನಲ್ಲಿ ಕಂಪ್ಯೂಟರ್ ಆಧರಿತ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿಗೆ ssc.gov.in ಇಲ್ಲಿಗೆ ಭೇಟಿ ನೀಡಿ.
ಬಿಎಸ್ಎಫ್ನಲ್ಲಿ ಹುದ್ದೆಗಳು: ಗಡಿ ಭದ್ರತಾ ಪಡೆಯಲ್ಲಿರುವ 1,526 ಸಹಾಯಕ ಸಬ್ ಇನ್ಸ್ಪೆಕ್ಟರ್ (ಮಿನಿಸ್ಟ್ರಿಯಲ್) ಮತ್ತು ಹೆಡ್ ಕಾನ್ಸ್ಟೇಬಲ್ (ಕ್ಲರ್ಕ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 243 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ವಾರೆಂಟ್ ಆಫೀಸರ್, 1283 ಹೆಡ್ ಕಾನ್ಸ್ಟೇಬಲ್ ಮತ್ತು ಹವೀಲ್ದಾರ್ (ಕ್ಲರ್ಕ್) ಹುದ್ದೆಗಳ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್ ಹುದ್ದೆಗಳಿಗೆ ಟೈಪಿಂಗ್ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಲಿಖಿತ, ದೇಹದಾರ್ಢ್ಯತೆ, ಕೌಶಲ್ಯ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಯುತ್ತದೆ. ಜೂನ್ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 8 ಕಡೇಯ ದಿನ. ಹೆಚ್ಚಿನ ಮಾಹಿತಿಗೆ rectt.bsf.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ವರ್ಷಕ್ಕೆ 70 ಲಕ್ಷದವರೆಗಿನ ಸಂಬಳ ಬೇಕಾ?: ಭಾರತದಲ್ಲಿ ಅತಿ ಹೆಚ್ಚು ಸ್ಯಾಲರಿ ಪಡೆಯುವ ಉದ್ಯೋಗಗಳಿವು