ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಜಿಲ್ಲಾ ಪಂಚಾಯತ್ ಅರ್ಜಿ ಆಹ್ವಾನಿಸಿದೆ. ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ: ಒಟ್ಟು 19 ಹುದ್ದೆಗಳು
- ತಾಂತ್ರಿಕ ಸಹಾಯಕರು - 1
- ತಾಂತ್ರಿಕ ಸಹಾಯಕರು - ಅರಣ್ಯ- 3
- ತಾಂತ್ರಿಕ ಸಹಾಯಕರು (ತೋಟಗಾರಿಕೆ) - 4
- ತಾಂತ್ರಿಕ ಸಹಾಯಕರು (ರೇಷ್ಮೆ) 2
- ತಾಂತ್ರಿಕ ಸಹಾಯಕರು (ಕೃಷಿ) - 5
- ಆಡಳಿತ ಸಹಾಯಕರು- 4
ವಿದ್ಯಾರ್ಹತೆ: ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಬಿಇ, ಬಿಎಸ್ಸಿಯಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ಶಾಸ್ತ್ರದಲ್ಲಿ ಪದವಿ ಹೊಂದಿರಬೇಕು. ಆಡಳಿತ ಸಹಾಯಕರ ಹುದ್ದೆಗೆ ಬಿ.ಕಾಂ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವವರು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಹುದ್ದೆ ನಿರ್ವಹಣೆಯ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ, ಕನ್ನಡ ಹಾಗೂ ಇಂಗ್ಲಿಷ್ ಟೈಪಿಂಗ್ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ.
ವಯೋಮಿತಿ: ಕನಿಷ್ಠ 21 ಮತ್ತು ಗರಿಷ್ಠ 40 ವರ್ಷ.
ವೇತನ: ಮಾಸಿಕ 28 ಸಾವಿರ ರೂ ಜೊತೆಗೆ 2,000 ರೂ ಪ್ರಯಾಣ ಭತ್ಯೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕವಿಲ್ಲ. ಅಕ್ಟೋಬರ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 20 ಕಡೇಯ ದಿನ. ಈ ಕುರಿತು ಹೆಚ್ಚಿನ ಮಾಹಿತಿಗೆ mandya.nic.inಗೆ ಭೇಟಿ ನೀಡಿ.

ನಾಳೆಯೇ ಅಂತಿಮ ದಿನ!: ಕೊಪ್ಪಳ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಕಸಲು ಅಕ್ಟೋಬರ್ 4 ಕಡೇಯ ದಿನ. ಬಿಇ, ಎಂಸಿಎ, ಬಿಸಿಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಂಬಂಧಿಸಿದ ಕ್ಷೇತ್ರದಲ್ಲಿ ಉದ್ಯೋಗ ನಿರ್ವಹಣೆಯ 3 ವರ್ಷದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊಪ್ಪಳ ಜಿಲ್ಲಾ ಪಂಚಾಯತ್ನ ಅಧಿಕೃತ ವೆಬ್‌ಸೈಟ್ koppal.nic.in ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಮೈಸೂರಿನಲ್ಲಿ 412, ಕೊಪ್ಪಳದಲ್ಲಿ 461 ಅಂಗನವಾಡಿ ಉದ್ಯೋಗ; ಅಧಿಸೂಚನೆ ಪ್ರಕಟ