ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ(ಬಿಇಎಲ್) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಒಟ್ಟು 55 ಹುದ್ದೆಗಳ ಭರ್ತಿ.
- ಟ್ರೈನಿ ಇಂಜಿನಿಯರ್: 33
- ಪ್ರಾಜೆಕ್ಟ್ ಇಂಜಿನಿಯರ್: 22
ವಿದ್ಯಾರ್ಹತೆ: ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ, ಬಿ.ಟೆಕ್ ಅಥವಾ ಬಿ.ಎಸ್ಸಿ ಪದವಿ ಹೊಂದಿರಬೇಕು.
ವಯೋಮಿತಿ: ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷ. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷ.

ವಿಶೇಷ ಸೂಚನೆ: ಟ್ರೈನಿ ಇಂಜಿನಿಯರಿಂಗ್ ಹುದ್ದೆಯನ್ನು 2 ವರ್ಷಗಳ ಅವಧಿಗೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಒಂದು ವರ್ಷ ಹುದ್ದೆ ವಿಸ್ತರಣೆ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ 6 ತಿಂಗಳ ಹುದ್ದೆ ನಿರ್ವಹಣೆ ಅನುಭವ ಹೊಂದಿರಬೇಕು.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 3 ವರ್ಷದ ಅವಧಿಗೆ ನೇಮಕಾತಿ ನಡೆಸಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಒಂದು ವರ್ಷ ಹುದ್ದೆ ವಿಸ್ತರಣೆ ನಡೆಯಲಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಎರಡು ವರ್ಷದ ಹುದ್ದೆ ನಿರ್ವಹಣೆ ಅನುಭವ ಹೊಂದಿರಬೇಕು.
ವೇತನ:
- ಟ್ರೈನಿ ಇಂಜಿನಿಯರ್ : 30,000- 40,000 ರೂ ಮಾಸಿಕ
- ಪ್ರಾಜೆಕ್ಟ್ ಇಂಜಿನಿಯರ್: 40,000-55,000 ರೂ ಮಾಸಿಕ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಜೊತೆಗೆ ಲಭ್ಯವಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ, ಅದರ ಜೊತೆಗೆ ಶೈಕ್ಷಣಿಕ ಸೇರಿದಂತೆ ಅಗತ್ಯ ದಾಖಲಾತಿಯೊಂದಿಗೆ ಕೆಳಗಿನ ವಿಳಾಸಕ್ಕೆ ಅಂತಿಮ ದಿನಕ್ಕೆ ಮುನ್ನ ತಲುಪುವಂತೆ ಪೋಸ್ಟ್ ಮಾಡಬೇಕು.
ಮ್ಯಾನೇಜರ್(ಎಚ್.ಆರ್), ಪ್ರೊಡಕ್ಟ್ ಡೆವೆಲಪ್ಮೆಂಟ್ ಆ್ಯಂಡ್ ಇನ್ನೊವೇಷನ್ ಸೆಂಟರ್ (ಪಿಡಿಐಸಿ), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಪ್ರೊ.ಯು.ಆರ್.ರಾವ್ ರೋಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು- 560013.
ಜನವರಿ 31ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಫೆಬ್ರವರಿ 14 ಕಡೆಯ ದಿನಾಂಕ. ಈ ಕುರಿತು ಹೆಚ್ಚಿನ ಮಾಹಿತಿಗೆ bel-india.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಐಐಎಂಬಿ ಮತ್ತು ಐಐಎಸ್ಸಿಯಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಹುದ್ದೆಗಳ ಮಾಹಿತಿ