ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಫ್ರೆಶರ್ಸ್ಗೆ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರು ವಲಯದಲ್ಲಿನ ಒಟ್ಟು 517 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳು ತಾತ್ಕಾಲಿಕವಾಗಿದ್ದು, ಗುತ್ತಿಗೆ ಆಧಾರಿತವಾಗಿದೆ.
ಹುದ್ದೆಗಳು: ಬಿಇಎಲ್ನ ವಲಯವಾರು ಹುದ್ದೆಗಳು ಹೀಗಿದೆ.
- ಕೇಂದ್ರ - 68
- ಪೂರ್ವ - 86
- ಪಶ್ಚಿಮ - 139
- ಉತ್ತರ - 78
- ಈಶಾನ್ಯ - 15
- ದಕ್ಷಿಣ - 131
ವಿದ್ಯಾರ್ಹತೆ: ಅಭ್ಯರ್ಥಿಗಳು ಬಿಇ, ಬಿಟೆಕ್, ಎಂಇ ಮತ್ತು ಎಂಟೆಕ್ ಪದವಿಯನ್ನು ಶೇ 55ರಷ್ಟು ಉತ್ತೀರ್ಣತೆ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಬಿಇ, ಬಿಟೆಕ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 28 ಆಗಿದ್ದು, ಎಂಇ, ಎಂಟೆಕ್ ವಿದ್ಯಾರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆಗಳನ್ನು ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಮತ್ತೊಂದು ವರ್ಷ ವಿಸ್ತರಣೆ ಮಾಡಲಾಗುವುದು.
ವೇತನ: ಈ ಹುದ್ದೆಗೆ 30,000 -40,000 ಮಾಸಿಕ ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಫೆಬ್ರವರಿ 28 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್ 13 ಆಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ಮಾಹಿತಿಗೆ bel-india.in ಇಲ್ಲಿಗೆ ಭೇಟಿ ನೀಡಿ.
1000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಅಧಿಸೂಚನೆ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಸಾವಿರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 21,400 - 42,000 ರೂ. ಮಾಸಿಕ ವೇತನ ನಿಗದಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 1 ಆಗಿದೆ. ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರಗಳಿಗೆ kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಬೆಂಗಳೂರಿನ ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿದೆ ಅಪ್ರೆಂಟಿಸ್ ಹುದ್ದೆ ನೇಮಕಕ್ಕೆ ಅಧಿಸೂಚನೆ