ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು(ಯುಪಿಎಸ್‌ಸಿ) ಸಹಾಯಕ ಪ್ರೋಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ತನಿಖಾ ದಳ (ಸಿಬಿಐ), ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯಕ್ಕೆ ಈ ನೇಮಕಾತಿ ನಡೆಯಲಿದೆ.
ಹುದ್ದೆಗಳು: ಒಟ್ಟು 27 ಅಸಿಸ್ಟೆಂಟ್ ಪ್ರೋಗ್ರಾಮರ್ ಹುದ್ದೆಗಳು
ವಿದ್ಯಾರ್ಹತೆ: ಬಿಇ, ಬಿಟೆಕ್, ಎಂಇ, ಎಂಟೆಕ್ ಮತ್ತು ಎಂಸಿಎ ಪದವಿ.
ವಯೋಮಿತಿ: ಗರಿಷ್ಟ ವಯೋಮಿತಿ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ, ವಿಶೇಷಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಇತರೆ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ.
ನವೆಂಬರ್ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 28 ಕಡೇಯ ದಿನ.
ಈ ಕುರಿತ ಹೆಚ್ಚಿನ ಮಾಹಿತಿಗೆ upsc.gov.in ಭೇಟಿ ನೀಡಿ.
ಎಚ್ಎಎಲ್ನಲ್ಲಿ ಉದ್ಯೋಗಾವಕಾಶ: ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ನಲ್ಲಿ(ಹೆಚ್‌ಎಎಲ್) ಡಿಪ್ಲೊಮಾ ಟೆಕ್ನಿಷಿಯನ್ ಮತ್ತು ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 57 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ನಾಲ್ಕು ವರ್ಷಗಳ ಅವಧಿಗೆ ನೇಮಕಾತಿ ನಡೆಯಲಿದೆ.
28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ ಶುಲ್ಕ ವಿನಾಯಿತಿ ಇದ್ದು, ಇತರೆ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 24 ಕೊನೆಯ ದಿನ. ಈ ಕುರಿತ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು hal-india.co.in ಇಲ್ಲಿಗೆ ಭೇಟಿ ಮಾಡಿ.
ಇದನ್ನೂ ಓದಿ: ಐಡಿಬಿಐ ಬ್ಯಾಂಕ್ನಲ್ಲಿ 1000 ಹುದ್ದೆ ಭರ್ತಿಗೆ ಅಧಿಸೂಚನೆ; ಪದವಿ ಆದವರಿಗೆ ಅವಕಾಶ