ಬೆಂಗಳೂರು: ಡಾಟಾ ಎಂಟ್ರಿ ಆಪರೇಟರ್ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳ ಭರ್ತಿಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಅಧಿಸೂಚನೆ ಹೊರಡಿಸಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳನ್ನು ಗೌರವಧನದೊಂದಿಗೆ ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.
ಹುದ್ದೆಗಳು: ಒಟ್ಟು 3 ಹುದ್ದೆಗಳು
ತಾಂತ್ರಿಕ ಸಹಾಯಕರು - 1
ಡಾಟಾ ಎಂಟ್ರಿ ಆಪರೇಟರ್ - 2
ವಿದ್ಯಾರ್ಹತೆ ಮತ್ತು ವೇತನ: ತಾಂತ್ರಿಕ ಸಹಾಯಕ ಹುದ್ದೆಗೆ ಅಭ್ಯರ್ಥಿಗಳು ಬಿಇ ಸಿವಿಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ₹28,000 ಜೊತೆಗೆ ₹2,000 ಟಿಎ ನೀಡಲಾಗುತ್ತದೆ.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಈಗಾಗಲೇ 2ರಿಂದ 3 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಈ ಹುದ್ದೆಗೆ ₹18,480 ಮಾಸಿಕ ಗೌರವಧನ ನೀಡಲಾಗುತ್ತದೆ.
ವಯೋಮಿತಿ: ಕನಿಷ್ಟ 25, ಗರಿಷ್ಠ 40 ವರ್ಷ ವಯೋಮಿತಿ ಮೀರಿರಬಾರದು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜಾಲತಾಣದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಿಲ್ಲ.
ಜನವರಿ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 8 ಕಡೇಯ ದಿನ.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು zpuk.karnataka.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: UPSC ನೇಮಕಾತಿ; ನಾಗರೀಕ ಸೇವಾ ಪರೀಕ್ಷೆಗೆ ಅಧಿಸೂಚನೆ
ಇದನ್ನೂ ಓದಿ: ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ನಿಗಮದಲ್ಲಿ 250 ಅಪ್ರೆಂಟಿಸ್ ಹುದ್ದೆಗೆ ಅರ್ಜಿಗಳ ಆಹ್ವಾನ