ಬೆಂಗಳೂರು: ಪಶು ಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯಲ್ಲಿ ಪಶು ವೈದ್ಯಾಧಿಕಾರಿಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಒಟ್ಟು 400 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ: 358 ಹುದ್ದೆಗಳೊಂದಿಗೆ 58 ಬ್ಯಾಕ್ಲಾಗ್ ಸೇರಿ ಒಟ್ಟು 400 ಹುದ್ದೆಗಳು.
ವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿವಿಎಸ್ಸಿ ಅಥವಾ ಬಿವಿಎಸ್ಸಿ ಮತ್ತು ಎಎಚ್ನಲ್ಲಿ ಪದವಿ ಹೊಂದಿರಬೇಕು. ಕೆವಿಎಸ್ ಮತ್ತು ಐವಿಎಸ್ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
ವೇತನ: 52,650- 97,100 ರೂ ಮಾಸಿಕ
ವಯೋಮಿತಿ: ಗರಿಷ್ಠ ವಯೋಮಿತಿ 35 ವರ್ಷ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ, 2ಎ, 2ಬಿ, 3ಎ, 3ಬಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 300 ರೂ, ನಿವೃತ್ತ ಸೇವಾ ಅಭ್ಯರ್ಥಿಗಳಿಗೆ 50 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ.ಜಾ, ಪ.ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ (2 ಪತ್ರಿಕೆ ಇರುವ ಪರೀಕ್ಷೆ) ಮತ್ತು ಸಂದರ್ಶನದ ಮೂಲಕ ಆಯ್ಕೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 12ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಸೆಪ್ಟೆಂಬರ್ 12. ಈ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: SSC ನೇಮಕಾತಿ; 2006 ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ