ETV Bharat / education-and-career

ನಿಮ್ಹಾನ್ಸ್​ನಲ್ಲಿ ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ವಾಕ್​ ಇನ್​ ಸಂದರ್ಶನ - Data entry operator job in Nimhans

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 30ರಂದು ಬೆಳಗ್ಗೆ 10ಕ್ಕೆ ನಡೆಯುವ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದು.

Walk in Interview for Data entry operator job in Nimhans
ಉದ್ಯೋಗ ಮಾಹಿತಿ (ಈಟಿವಿ ಭಾರತ್​​)
author img

By ETV Bharat Karnataka Team

Published : Jul 26, 2024, 2:40 PM IST

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್​)ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್​​ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಐಸಿಎಂಆರ್​ ನಿಧಿ ಪ್ರಾಯೋಜಿತ ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿ ಮಾಡಲಾಗುವುದು. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Walk in Interview for Data entry operator job in Nimhans
ಅಧಿಸೂಚನೆ (ನಿಮ್ಹಾನ್ಸ್​​)

ಹುದ್ದೆ ವಿವರ: ಡೇಟಾ ಎಂಟ್ರಿ ಆಪರೇಟರ್​ - 1 ಹುದ್ದೆ

ವಿದ್ಯಾರ್ಹತೆ: ಅಭ್ಯರ್ಥಿಗಳು ಪದವೀಧರರಾಗಿರಬೇಕು. ಜೊತೆಗೆ ಒಂದು ವರ್ಷ ಕಂಪ್ಯೂಟರ್​ ಅಪ್ಲಿಕೇಷನ್​ ಕೋರ್ಸ್​ ಅನ್ನು ಪೂರ್ಣಗೊಳಿಸಿರಬೇಕು..

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷ ದಾಟಿರಬಾರದು. ಮೂರು ತಿಗಂಳ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಅವಧಿಯಲ್ಲಿ ಮಾಸಿಕ 19,280 ರೂಗಳನ್ನು ಗೌರವಧನವಾಗಿ ನೀಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 30ರಂದು ಬೆಳಗ್ಗೆ 10ಕ್ಕೆ ನಡೆಯುವ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದು.

ಸ್ಥಳ: ಕಮಿಟಿ ರೂಂ, ರಿಜಿಸ್ಟರ್​ ಸೆಕ್ರೆಟರಿ ಕೋಣೆ ಪಕ್ಕ, ಓಲ್ಡ್​ ಅಡ್ಮಿನ್​ ಬ್ಲಾಕ್​, ಗ್ರೌಂಡ್​ ಫ್ಲೋರ್​, ನಿಮ್ಹಾನ್ಸ್​​, ಬೆಂಗಳೂರು- 560029

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು nimhans.ac.in ಇಲ್ಲಿಗೆ ಭೇಟಿ ನೀಡಿ.

SSC ಹುದ್ದೆಗೆ ಅರ್ಜಿ ಸಲ್ಲಿಕೆಗೆ ಜು. 31 ಕೊನೆಯ ದಿನ: ಸಿಬ್ಬಂದಿ ನೇಮಕಾತಿ ಆಯೋಗವು (SSC) 8,326 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 4,887 ಎಂಟಿಎಸ್ (ತಾಂತ್ರಿಕೇತರ)​ ಮತ್ತು 3,439 ಹವಾಲ್ದಾರ್​ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು.

ಗರಿಷ್ಠ 27 ವರ್ಷ ದಾಟದ ಎಸ್​ಎಸ್​ಎಲ್​ಸಿ ಅಥವಾ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ, ವಿಶೇಷಚೇತನ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಭರಿಸಬೇಕಿದೆ. ಲಿಖಿತ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಮೂಲಕ ಹುದ್ದೆ ಆಯ್ಕೆ ನಡೆಯಲಿದೆ. ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿಗೆ ssc.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಬೆಂಗಳೂರು: ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.