ಬೆಂಗಳೂರು: ದಾವಣಗೆರೆ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. ಈ ಜಿಲ್ಲೆಗಳಲ್ಲಿ ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ:
ಹಾಸನ ಒಟ್ಟು ಹುದ್ದೆಗಳ ಸಂಖ್ಯೆ 734
ಜಿಲ್ಲೆಯ 8 ತಾಲೂಕಿನಲ್ಲಿ 168 ಅಂಗನವಾಡಿ ಕಾರ್ಯಕರ್ತರು, 566 ಅಂಗನವಾಡಿ ಸಹಾಯಕರ ಹುದ್ದೆ ನೇಮಕಾತಿ ನಡೆಯಲಿದೆ. ಹಾಸನ ತಾಲೂಕು- 71, ಚನ್ನರಾಯಪಟ್ಟಣ- 142, ಹೊಳೆನರಸೀಪುರ -88, ಬೇಲೂರು -89, ಸಕಲೇಶಪುರ- 61, ಆಲೂರು- 25, ಅರಸೀಕೆರೆ -171, ಅರಕಲಗೂಡು- 67
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಕಡೆಯ ದಿನಾಂಕ ಸೆಪ್ಟೆಂಬರ್ 4 ಆಗಿದೆ.
ದಾವಣಗೆರೆ ಒಟ್ಟು ಹುದ್ದೆಗಳ ಸಂಖ್ಯೆ- 237
ದಾವಣಗೆರೆಯ ಜಿಲ್ಲೆಯ ಹರಿಹರ, ಜಗಳೂರು, ಹೊನ್ನಾಳಿ, ಚನ್ನಗಿರಿ, ದಾವಣಗೆರೆ ತಾಲೂಕಿನಲ್ಲಿ ಖಾಲಿ ಇರುವ 99 ಅಂಗನವಾಡಿ ಕಾರ್ಯಕರ್ತರು, 198 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 9 ಆಗಿದೆ.
ಬಳ್ಳಾರಿಯಲ್ಲಿನ ಒಟ್ಟು ಹುದ್ದೆ ಸಂಖ್ಯೆ - 141
ಬಳ್ಳಾರಿ ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 22 ಅಂಗನವಾಡಿ ಕಾರ್ಯಕರ್ತರು, 119 ಅಂಗನಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ಇಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಆಯ್ಕೆ ಮಾಡಿ, ಬಳಿಕ ಯಾವ ಹುದ್ದೆ ಎಂಬುದನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬೇಕಿದೆ.
ಇದನ್ನೂ ಓದಿ: ಅಂಗನವಾಡಿಯಲ್ಲಿ ಉದ್ಯೋಗ: ಈ 5 ಜಿಲ್ಲೆಗಳಲ್ಲಿ ನೇಮಕಾತಿ