ETV Bharat / education-and-career

ಮೈಸೂರಿನಲ್ಲಿ 412, ಕೊಪ್ಪಳದಲ್ಲಿ 461 ಅಂಗನವಾಡಿ ಉದ್ಯೋಗ; ಅಧಿಸೂಚನೆ ಪ್ರಕಟ - Anganwadi Jobs - ANGANWADI JOBS

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

WCD Recruitment notification For Anganwadi jobs in Mysore and koppala
ಅಂಗನವಾಡಿ ಉದ್ಯೋಗ ಮಾಹಿತಿ (ETV Bharat)
author img

By ETV Bharat Karnataka Team

Published : Sep 27, 2024, 2:03 PM IST

ಬೆಂಗಳೂರು: ಮೈಸೂರು ಮತ್ತು ಕೊಪ್ಪಳ ಜಿಲ್ಲೆಯ ವಿವಿಧೆಡೆ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಮೈಸೂರು ಜಿಲ್ಲೆಯಲ್ಲಿರುವ ಹುದ್ದೆಗಳ ವಿವರ: ಒಟ್ಟು 412 ಹುದ್ದೆಗಳಿಗೆ ನೇಮಕಾತಿ.

  • ಅಂಗನವಾಡಿ ಕಾರ್ಯಕರ್ತರು - 83
  • ಅಂಗನವಾಡಿ ಸಹಾಯಕರು - 329

ಕೊಪ್ಪಳ ಜಿಲ್ಲೆಯ ಹುದ್ದೆಗಳ ವಿವರ: ಒಟ್ಟು 461 ಹುದ್ದೆಗಳ ನೇಮಕಾತಿ.

  • ಅಂಗನವಾಡಿ ಕಾರ್ಯಕರ್ತರು- 87
  • ಅಂಗನವಾಡಿ ಸಹಾಯಕಿಯರು- 374

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್​ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗದಿಯಾಗಿಲ್ಲ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು.

ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಮೈಸೂರು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಅಕ್ಟೋಬರ್​​ 19 ಆಗಿದ್ದರೆ, ಕೊಪ್ಪಳದ ಹುದ್ದೆಗಳ ಭರ್ತಿಗೆ ಕಡೇಯ ದಿನಾಂಕ ಅಕ್ಟೋಬರ್​ 23.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಬಳ್ಳಾರಿಯಲ್ಲಿದೆ ಸ್ಟಾಫ್​ ನರ್ಸ್​​ ಉದ್ಯೋಗ: ನೀವು ಅರ್ಹರೆ, ಈಗಲೇ ಅರ್ಜಿ ಗುರಾಯಿಸಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.