ETV Bharat / education-and-career

ಅಂಗನವಾಡಿ ಉದ್ಯೋಗ: ಯಾದಗಿರಿ, ಗದಗ, ವಿಜಯನಗರ ಜಿಲ್ಲೆಗಳಲ್ಲಿ ನೇಮಕಾತಿ - ANGANWADI RECRUITMENT

ಅಂಗನವಾಡಿಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶವಿದೆ. ಗದಗದಲ್ಲಿ 196, ವಿಜಯನಗರದಲ್ಲಿ 297 ಮತ್ತು ಯಾದಗಿರಿಯಲ್ಲಿ 470 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Women and child Development dept Anganwadi Recruitment Notification
ಅಂಗನವಾಡಿ ಉದ್ಯೋಗವಾಕಾಶ (ಈಟಿವಿ ಭಾರತ್​​)
author img

By ETV Bharat Karnataka Team

Published : Aug 27, 2024, 3:33 PM IST

Updated : Aug 27, 2024, 4:31 PM IST

ಬೆಂಗಳೂರು: ಗದಗ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಪ್ರಕಟಿಸಲಾಗಿದೆ.

ಗದಗ ಜಿಲ್ಲೆಯಲ್ಲಿನ ನೇಮಕಾತಿ: ಜಿಲ್ಲೆಯಲ್ಲಿ ಒಟ್ಟು 196 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 46 ಅಂಗನವಾಡಿ ಕಾರ್ಯಕರ್ತರು ಮತ್ತು 150 ಅಂಗನವಾಡಿ ಸಹಾಯಕರ ಹುದ್ದೆ ಆಗಿದೆ.

ಗದಗದ ಈ ತಾಲೂಕಿನಲ್ಲಿದೆ ಹುದ್ದೆ

  • ಮುಂಡರಗಿ - 29
  • ನರಗುಂದ - 17
  • ಗದಗ - 45
  • ರೋಣ - 35
  • ಶಿರಹಟ್ಟಿ -70

ಅರ್ಜಿ ಸಲ್ಲಿಕೆ ಕಡೆಯ ದಿನ: ಸೆಪ್ಟೆಂಬರ್​ 17

ವಿಜಯನಗರ ಜಿಲ್ಲೆಯಲ್ಲಿ ನೇಮಕಾತಿ: ಜಿಲ್ಲೆಯಲ್ಲಿ 297 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 58 ಕಾರ್ಯಕರ್ತರು ಮತ್ತು 239 ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

  • ಹೂವಿನ ಹಡಗಲಿ - 56
  • ಹಗರಿಬೊಮ್ಮನಹಳ್ಳಿ 32
  • ಹೊಸಪೇಟೆ - 54
  • ಕೂಡ್ಗಿಗಿ - 53
  • ಹರಪನಹಳ್ಳಿ - 82
  • ಕೊಟ್ಟೂರು - 21

ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಸೆಪ್ಟೆಂಬರ್​ 12

ಯಾದಗಿರಿಯಲ್ಲಿ 470 ಹುದ್ದೆ: ಜಿಲ್ಲೆಯಲ್ಲಿ 159 ಅಂಗನವಾಡಿ ಕಾರ್ಯಕರ್ತರು ಮತ್ತು 311 ಅಂಗನವಾಡಿ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

  • ಶಹಾಪುರದಲ್ಲಿ - 124
  • ಸುರಪುರ - 221
  • ಯಾದಗಿರಿ - 54
  • ಗುರುಮಠಕಲ್​ - 71

ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 13 ಆಗಿದೆ.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 19ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ, ಆನ್​ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗದಿಯಾಗಿಲ್ಲ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆ ಆಯ್ಕೆ ಮಾಡಿ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಬೆಂಗಳೂರಿನ ಕಾಫಿ ಬೋರ್ಡ್​​ನಲ್ಲಿ ಗ್ರಾಫಿಕ್​ ಡಿಸೈನರ್​, ಕಂಟೆಂಟ್​ ಕ್ರಿಯೇಟರ್​ ಹುದ್ದೆ

Last Updated : Aug 27, 2024, 4:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.