ETV Bharat / entertainment

ಚಲನಚಿತ್ರೋತ್ಸವದಲ್ಲಿ ಸಿನಿಮಾರಂಗದ ಪರವಾಗಿ ಬೇಡಿಕೆ ಇಟ್ಟ ಧನಂಜಯ್: ಡಾಲಿ ಮಾತಿಗೆ ಸಿಎಂ ಸಮ್ಮತಿ - ಡಾಲಿ ಧನಂಜಯ್

ಎಂಟು ದಿನಗಳ ಕಾಲ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು.

15th Bangalore International Film Festival
15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ
author img

By ETV Bharat Karnataka Team

Published : Mar 1, 2024, 6:53 AM IST

ಬೆಂಗಳೂರು: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿ ಬೆಂಗಳೂರು ಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರನ್ನು ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. ಡಾಲಿ ಅವರನ್ನು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ.

15th Bangalore International Film Festival
15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ್, ಸಾಧು ಕೋಕಿಲ, ಆರಾಧನಾ ಸೇರಿದಂತೆ ಅನೇಕ ಸಿನಿ ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಡಾಲಿ ಮಾತನಾಡಿ ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟರು.

"ಕೊರೊನಾ ಬಳಿಕ ಸಬ್ಸಿಡಿ ಹಾಗೂ ಪ್ರಶಸ್ತಿ ನೀಡುವುದನ್ನೂ ಕೂಡ ನಿಲ್ಲಿಸಲಾಗಿದೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಕಾಂತಾರ, ಕೆಜಿಎಫ್ ಅಂತಹ ಸಿನಿಮಾಗಳು ಕನ್ನಡ ಸಿನಿಮಾರಂಗವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿವೆ. ಇದರ ಜೊತೆಗೆ ಸರ್ಕಾರದ ಪ್ರೋತ್ಸಾಹ ಕೂಡ ಬಹಳ ಮುಖ್ಯ. ಸದ್ಯ ನಿಂತಿರುವ ಪ್ರಶಸ್ತಿ ಮತ್ತು ಸಬ್ಸಿಡಿಯನ್ನು ಮುಂದುವರೆಸಬೇಕೆಂದು ಚಿತ್ರರಂಗದ ಪರವಾಗಿ ನಾನು ಸಿಎಂ ಬಳಿ ಕೇಳಿಕೊಳ್ಳುತ್ತಿದ್ದೇನೆ" ಎಂದು ಡಾಲಿ ಮನವಿ ಮಾಡಿದರು.

ಧನಂಜಯ್ ಮಾತುಗಳಿಗೆ ಸಿಎಂ ಸಿದ್ದರಾಮಯ್ಯ ಅಲ್ಲೇ ಸಮ್ಮತಿ ಸೂಚಿಸಿದರು. ಚಿತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಚಿತ್ರೋತ್ಸವಕ್ಕೆ ಸರ್ಕಾರ ಸಕಲ ರೀತಿಯ ನೆರವು ನೀಡಿದೆ. ಮುಂದೆಯೂ ಸಹ ಚಿತ್ರರಂಗಕ್ಕೆ ಎಲ್ಲ ಸಹಾಯವನ್ನು ಮಾಡಲಿದೆ. ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ಕೊಡುತ್ತೇನೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ಈಗ ನಾನು ಕಮಿಟಿಗಳನ್ನು ಮಾಡಿದ್ದೇನೆ. ಆ ಕಮಿಟಿ ವರದಿ ಕೊಟ್ಟ ತಕ್ಷಣ ಎಲ್ಲಾ ವರ್ಷದ ಪ್ರಶಸ್ತಿಗಳನ್ನು ನೀಡಲಾಗುವುದು" ಎಂದರು.

ಗುರುವಾರ ಉದ್ಘಾಟನೆಯಾದ ಚಲನಚಿತ್ರೋತ್ಸವವು ಮಾರ್ಚ್​ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200 ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

ಇದನ್ನೂ ಓದಿ: ಹಾಲಿವುಡ್​​ನಲ್ಲಿ ಮರು ನಿರ್ಮಾಣವಾಗಲಿರುವ ಭಾರತದ ಮೊದಲ ಸಿನಿಮಾ 'ದೃಶ್ಯಂ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.