ETV Bharat / entertainment

'ಎಲ್ಲಿಗೆ ಪಯಣ ಯಾವುದೋ ದಾರಿ' ಅಂತಿದ್ದಾರೆ ಕಾಶಿನಾಥ್ ಪುತ್ರ ಅಭಿಮನ್ಯು - Abhhimanyu Kashinath - ABHHIMANYU KASHINATH

ಅಭಿಮನ್ಯು ಕಾಶಿನಾಥ್ ಅಭಿನಯದ 'ಎಲ್ಲಿಗೆ ಪಯಣ ಯಾವುದೋ ದಾರಿ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೇರೆಯದ್ದೇ ತೆರನಾದ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದು, ಸದ್ಯದಲ್ಲೇ ಚಿತ್ರ ಬಿಡುಗಡೆಗೆ ಸಿದ್ಧತೆ ನಡೆದಿದೆ.

ಕಾಶಿನಾಥ್ ಪುತ್ರ ಅಭಿಮನ್ಯು
ಕಾಶಿನಾಥ್ ಪುತ್ರ ಅಭಿಮನ್ಯು (ETV Bharat)
author img

By ETV Bharat Karnataka Team

Published : Sep 12, 2024, 11:25 AM IST

Updated : Sep 12, 2024, 11:46 AM IST

ಕನ್ನಡ ಚಿತ್ರರಂಗದಲ್ಲಿ ಕಂಟೆಂಟ್ ಆಧರಿತ ಸಿನಿಮಾಗಳು ಬಂದರೆ ಖಂಡಿತವಾಗಿಯೂ ಸಿನಿಮಾ ಪ್ರೇಮಿಗಳು ಕೈ ಹಿಡಿಯುತ್ತಾರೆ ಎನ್ನಲು ಇತ್ತೀಚೆಗೆ ಬರ್ತಿರುವ ಸಿನಿಮಾಗಳು ನಿದರ್ಶನ. ಈಗ ಇಂತಹದ್ದೇ ಕಂಟೆಂಟ್​​ನೊಂದಿಗೆ 'ಎಲ್ಲಿಗೆ ಪಯಣ ಯಾವುದೋ ದಾರಿ' ಚಿತ್ರದ ಮೂಲಕ ತಂಡವೊಂದು ಎಂಟ್ರಿ ಕೊಟ್ಟಿದೆ. ಈಗಾಗಲೇ ತಣ್ಣಗೆ ಚಿತ್ರೀಕರಣವನ್ನೂ ಮುಗಿಸಿಕೊಂಡು, ಟೀಸರ್ ಬಿಡುಗಡೆ ಮಾಡಿದೆ.

ಸೀಮಿತ ದೃಶ್ಯಗಳಲ್ಲಿಯೇ ಕುತೂಹಲದ ಕೆನೆಗಟ್ಟಿರುವಂತೆ ಭಾಸವಾಗುವ ಈ ಟೀಸರ್ ಪ್ರೇಕ್ಷಕರನ್ನು ಸಲೀಸಾಗಿ ತನ್ನತ್ತ ಸೆಳೆದುಕೊಳ್ಳುವಂತಿದೆ. ಇದು ಕಾಶಿನಾಥ್ ಅವರ ಪುತ್ರ ಅಭಿಮನ್ಯು ಕಾಶಿನಾಥ್ ಅಭಿನಯದ ಚಿತ್ರ. ಬೇರೆಯದ್ದೇ ತೆರನಾದ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಟೀಸರ್‌ನಲ್ಲಿ ಅವರು ವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಧಾನವಾಗಿ ಇದೊಂದು ಥ್ರಿಲ್ಲರ್ ಕಥನ ಒಳಗೊಂಡಿರುವ ಚಿತ್ರವೆಂಬ ಸಂದೇಶವೊಂದು, ಅತ್ಯಂತ ಪರಿಣಾಮಕಾರಿಯಾಗಿ ಪ್ರೇಕ್ಷಕರಿಗೆ ತಲುಪಿದೆ. ಟೀಸರ್ ಜೊತೆ ಜೊತೆಗೇ ಒಂದಷ್ಟು ಸೂಕ್ಷ್ಮ ಸಂಗತಿಗಳನ್ನೂ ಚಿತ್ರತಂಡ ಹಂಚಿಕೊಂಡಿತು.

ಇದು ಕಿರಣ್ ಎಸ್.ಸೂರ್ಯ ನಿರ್ದೇಶನದ ಚೊಚ್ಚಲ ಚಿತ್ರ. ಈಗಾಗಲೇ 12 ವರ್ಷಗಳ ಕಾಲ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವವರು ಕಿರಣ್. ಇದರೊಂದಿಗೆ ಅವರು ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಲವ್ ಕಂ ಥ್ರಿಲ್ಲರ್ ಜಾನರಿನ ಚಿತ್ರ. ಹಾಗೆಂದ ಮಾತ್ರಕ್ಕೆ ಆ ಪರಿಧಿಗೆ ಸೀಮಿತವಾದ ಕಥೆ ಇದೆಂದು ಅಂದುಕೊಳ್ಳುವಂತಿಲ್ಲ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ ಅಂದುಕೊಳ್ಳಲೂ ಸಾಧ್ಯವಿಲ್ಲ. ಇದುವರೆಗೆ ನೋಡಿದ್ದು ನಿಜವೋ ಸುಳ್ಳೋ ಎಂಬಂತೆ ಬೆರಗಿಗೆ ದೂಡುವ ರೀತಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ವಿಶೇಷವೆಂದರೆ, ಕಿಚ್ಚ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ಶ್ರೀಲಕ್ಷ್ಮಿ ಒಂದೊಂದು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎರಡು ಹಾಡುಗಳಿಗೆ ಖುದ್ದು ನಿರ್ದೇಶಕ ಕಿರಣ್ ಎಸ್.ಸೂರ್ಯ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ಈ ಜಾಕೆಟ್ ಖರೀದಿಸಿದ್ದೇಕೆ ಗಣಿ; GF ಅನ್ನೋದರಲ್ಲೇ ಇದೆ ಅದರ ಗುಟ್ಟು - Ganesh Jacket Secret

ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ.

ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರ ನಿರ್ಮಿಸಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್.ಸೂರ್ಯ ನಿರ್ದೇಶನ ಮಾಡಿದ್ದಾರೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರೋ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ಧತೆ ನಡೆಸಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರೋರಿಂಗ್​ ಸ್ಟಾರ್: 'ಬಘೀರ' ರಿಲೀಸ್​​ ಡೇಟ್​ ಅನೌನ್ಸ್ - Bagheera release date

Last Updated : Sep 12, 2024, 11:46 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.