ETV Bharat / entertainment

ಶ್ರೀರಾಮನ ದರ್ಶನ ಪಡೆದ ರೋರಿಂಗ್ ಸ್ಟಾರ್ ಶ್ರೀಮುರಳಿ - ಶ್ರೀಮುರಳಿ

ಬೆಂಗಳೂರಿನ ರಾಜಾಜಿನಗರದಲ್ಲಿರೋ ಶ್ರೀರಾಮನ ದೇವಸ್ಥಾನಕ್ಕೆ ನಟ ಶ್ರೀಮುರಳಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀರಾಮನ ದರ್ಶನ ಪಡೆದ ರೋರಿಂಗ್ ಸ್ಟಾರ್ ಶ್ರೀಮುರಳಿ

author img

By ETV Bharat Karnataka Team

Published : Jan 22, 2024, 3:25 PM IST

ಶ್ರೀರಾಮನ ದರ್ಶನ ಪಡೆದ ರೋರಿಂಗ್ ಸ್ಟಾರ್ ಶ್ರೀಮುರಳಿ

ಉಗ್ರಂ ಚಿತ್ರದ ಮೂಲಕ‌ ಕನ್ನಡ‌ ಚಿತ್ರರಂಗದಲ್ಲಿ ನಟ‌ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಸ್ಟಾರ್ ಡಮ್‌ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಬಘೀರ ಸಿನಿಮಾದಲ್ಲಿ ಬ್ಯುಸಿಯಾಗಿರೋ ಶ್ರೀಮುರಳಿ ಇದೀಗ ರಾಮನ ಕೃಪೆಗೆ ಪಾತ್ರರಾಗಿದ್ದಾರೆ. ಹೌದು ದೇಶಾದ್ಯಂತ ಇಂದು ಭಕ್ತರು ಶ್ರೀ ರಾಮನ ಜಪ ಮಾಡುತ್ತಿದ್ದಾರೆ. 500 ವರ್ಷಗಳ ಹೋರಾಟದ ನಂತರ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ.

ಈ ವಿಶೇಷ ದಿನದಂದು ರೋರಿಂಗ್ ಶ್ರೀಮುರಳಿ, ಬೆಂಗಳೂರಿನ ರಾಜಾಜಿನಗರದಲ್ಲಿರೋ ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದರ ಜೊತೆಗೆ ಶ್ರೀರಾಮನ ದೇವಸ್ಥಾನದಲ್ಲಿ ಅದ್ದೂರಿಯಾಗಿ ಪೂಜೆ ಮಾಡಿದರು. ಬಳಿಕ ಶ್ರೀಮುರಳಿ ಅವರು ರಾಮನ ಬಗ್ಗೆ ಸೂಪರ್ ಹಾಡೊಂದನ್ನು ಹಾಡುವ ಮೂಲಕ ರಾಮನ ಆಶೀರ್ವಾದಕ್ಕೆ ಪಾತ್ರರಾಗಿದ್ದಾರೆ.

ಸದ್ಯ ಬಘೀರ ಸಿನಿಮಾದ ಶೂಟಿಂಗ್​ನಲ್ಲಿರೋ ಶ್ರೀಮುರಳಿ ಈ ಚಿತ್ರದಲ್ಲಿ ಮತ್ತೆ ಖಾಕಿ ಅವತಾರದಲ್ಲಿ ಪ್ರೇಕ್ಷಕರಿಗೆ ದರ್ಶನ ಕೊಡ್ತಾ ಇದ್ದಾರೆ. ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ ಸೂರಿ ಈ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ‌ ನಿರ್ದೇಶಕ ಸೂರಿ ಲಕ್ಕಿ ಸಿನಿಮಾವನ್ನ ನಿರ್ದೇಶನ ಮಾಡಿದ್ದರು. ಹೊಂಬಾಳೆ ಫಿಲ್ಮ್ ಅಡಿ ನಿರ್ಮಾಪಕ ವಿಜಯ್ ಕಿರಂಗದೂರ್ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಂದೇ ಅಯೋಧ್ಯೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಿಖಿಲ್ ಕುಮಾರಸ್ವಾಮಿ

ಅಯೋಧ್ಯೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಿಖಿಲ್ ಕುಮಾರಸ್ವಾಮಿ : ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳಿರುವ ನಟ ನಿಖಿಲ್​ ಕುಮಾರಸ್ವಾಮಿ ಅವರು ಅಯೋಧ್ಯೆಯಲ್ಲೇ ತಾತ, ಅಜ್ಜಿ, ತಂದೆ ಜೊತೆಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಜಾಗ್ವಾರ್​ ಹಾಗೂ ಸೀತಾರಾಮ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ತಮ್ಮದೇ ಆದ ಬ್ರ್ಯಾಂಡ್​ ಕ್ರಿಯೇಟ್​ ಮಾಡಿಕೊಂಡಿದ್ದಾರೆ. ಸದ್ಯ ತಮಿಳು​ ಸಿನಿರಂಗದ ಪ್ರತಿಷ್ಠಿತ ಲೈಕಾ ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆ, ಇನ್ನೂ ಹೆಸರಿಡದ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿರುವ ನಿಖಿಲ್​ ಕುಮಾರಸ್ವಾಮಿ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

33ನೇ ವಸಂತಕ್ಕೆ ಕಾಲಿಟ್ಟಿರುವ ನಿಖಿಲ್ ಕುಮಾರಸ್ವಾಮಿ ಕಳೆದ ವರ್ಷ ಅಭಿಮಾನಿಗಳ ಜೊತೆ ಜೆ. ಪಿ ನಗರದ ನಿವಾಸದಲ್ಲಿ ಗ್ರ್ಯಾಂಡ್ ಆಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದರು. ಆದರೆ, ಈ ವರ್ಷ ನಿಖಿಲ್ ಕುಮಾರಸ್ವಾಮಿ ವಿಶೇಷವಾಗಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಹೌದು, ಇಂದು ಭಾರತದಾದ್ಯಂತ ರಾಮ ಸ್ಮರಣೆ ಮಾಡುತ್ತಿದ್ದು, ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ನಡೆದಿದೆ. ಶ್ರಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಿಖಿಲ್​ ಕುಮಾರಸ್ವಾಮಿ ಹಾಗೂ ಕುಟುಂಬಕ್ಕೂ ಆಹ್ವಾನ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಖಿಲ್ ಕುಮಾರಸ್ವಾಮಿ ಅವರು, ತಂದೆ ಹೆಚ್​. ಡಿ ಕುಮಾರಸ್ವಾಮಿ ಹಾಗೂ ತಾತ ಹೆಚ್​ ಡಿ ದೇವೇಗೌಡ ಹಾಗೂ ಅಜ್ಜಿ ಚೆನ್ನಮ್ಮ ಅವರ ಜೊತೆಗೆ ಭಾನುವಾರವೇ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.