ETV Bharat / entertainment

ಸಸ್ಪೆನ್ಸ್ ಥ್ರಿಲ್ಲರ್ ಕಥೆಯೊಂದಿಗೆ ಬಂದ‌ ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ - Kangaroo Movie Trailer - KANGAROO MOVIE TRAILER

ಆದಿತ್ಯ ಮತ್ತು ರಂಜನಿ ರಾಘವನ್‌ ಜೋಡಿಯಾಗಿ ನಟಿಸಿರುವ 'ಕಾಂಗರೂ' ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಮೇ 3ರಂದು ಚಿತ್ರಮಂದಿರಗಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಆದಿತ್ಯ
ಆದಿತ್ಯ
author img

By ETV Bharat Karnataka Team

Published : Apr 13, 2024, 8:28 PM IST

ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆಯುತ್ತಿರುವ ಆದಿತ್ಯ ಮತ್ತು ರಂಜನಿ ರಾಘವನ್ ನಟನೆಯ 'ಕಾಂಗರೂ' ಚಿತ್ರದ ಟ್ರೈಲರ್ ಎ2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಚಿತ್ರದ ಚಿತ್ರೀಕರಣ ಭಾಗಶಃ ಪೂರ್ಣಗೊಂಡಿದ್ದು ಬಿಡುಗಡೆಗೂ ಸಜ್ಜಾಗಿದೆ. ಆದಿತ್ಯ ಮತ್ತೆ ಪೊಲೀಸ್ ಕಾಫ್ ಆಗಿ ಕಾಣಿಸಿಕೊಂಡಿರುವ ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರ ಇದಾಗಿದ್ದು ಟ್ರೇಲರ್​ ಮೂಲಕ ಗಾಂಧಿನಗರದಲ್ಲಿ ಸಖತ್​ ಸೌಂಡ್​ ಮಾಡುತ್ತಿದೆ.

ಹಿರಿಯ ಪಿಆರ್‌ಓ ಸುಧೀಂದ್ರ ವೆಂಕಟೇಶ್ ಅವರು ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ವೇಳೆ ಕರ್ನಾಟಕ ಸಣ್ಣ ಕೈಗಾರಿಕೆ ಉದ್ಯಮದ ಮಾಜಿ ಅಧ್ಯಕ್ಷ ಅರಸಪ್ಪ, ಪೀಣ್ಯ ಕೈಗಾರಿಕಾ ಉದ್ಯಮದ ಅಧ್ಯಕ್ಷ ಆರಿಫ್, ನಿರ್ಮಾಪಕ ಸಿಲ್ಕ್ ಮಂಜು ಸೇರಿ ಹಲವರು ಸಮಾರಂಭಕ್ಕೆ ಸಾಕ್ಷಿಯಾಗಿದೆ.

ಚಿತ್ರತಂಡ
ಚಿತ್ರತಂಡ

ಟ್ರೈಲರ್ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ಕಿಶೋರ್ ಮೇಗಳಮನೆ, ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ.‌ ಕನ್ನಡದಲ್ಲಿ ಸಾಕಷ್ಟು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಬಂದಿವೆಯಾದರೂ, ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ಫ್ಯಾಮಿಲಿ ಆಡಿಯನ್ಸ್​ಗಾಗಿಯೇ ಮಾಡಿರುವ ಕಥೆ ಇದು. ಇನ್ನು 'ಕಾಂಗರೂ' ಮೃದು ಸ್ವಭಾವದ ಪ್ರಾಣಿ. ಯಾರ ತಂಟೆಗೂ ಹೋಗುವುದಿಲ್ಲ. ಆದರೆ, ತನ್ನ ಮಕ್ಕಳ ತಂಟೆಗೆ ಬಂದರೆ ಅದು ಯಾರನ್ನು ಬಿಡುವುದಿಲ್ಲ. ಇದೇ ಚಿತ್ರದ ಕಥಾ ಸಾರಾಂಶ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ‌. ಆದಿತ್ಯ, ನಾಯಕಿ ರಂಜನಿ ರಾಘವನ್ ಸೇರಿದಂತೆ ಹಲವು ಕಲಾವಿದರ ಅಭಿನಯಿಸಿದ್ದಾರೆ ಎಂದು ಚಿತ್ರದ ಬಗ್ಗೆ ಕೆಲವು ಮಾಹಿತಿ ಹಂಚಿಕೊಂಡರು.

ನಟ ಆದಿತ್ಯ ಮಾತನಾಡಿ, ನಿನಿರ್ದೇಶಕ ಕಿಶೋರ್ ಅವರು ಕಥೆ ಕೇಳಿ ಎಂದರು. ನಾನು ಸರಿ ಎಂದೆ. ಆನಂತರ ಕೇಳುವುದು ಬೇಡ ಸರ್ ಸಿನಿಮಾನೇ ತೋರಿಸುತ್ತೇನೆ ಎಂದರು. ನನಗೆ ಆಶ್ಚರ್ಯವಾಯಿತು. ಚಿತ್ರದ ಕಥೆಯನ್ನು ಅನಿಮೇಶನ್ ಮೂಲಕ ತೋರಿಸಿದ ಪ್ರಥಮ ನಿರ್ದೇಶಕ ಇವರೆ ಇರಬಹುದು. ನಾನು ಈ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ಸೇರಿದಂತೆ ಎಲ್ಲಾ ಕನ್ನಡ ಚಿತ್ರಗಳನ್ನು ಚಿತ್ರಮಂದಿರಗಳಲ್ಲೇ ನೋಡಿ ಅಂದರು.

ಚಿತ್ರತಂಡ
ಚಿತ್ರತಂಡ

ಆದಿತ್ಯ ಜೋಡಿಯಾಗಿರುವ ರಂಜನಿ ರಾಘವನ್ ಮಾತನಾಡಿ, ನಾನು ಈ ಚಿತ್ರದಲ್ಲಿ ಮನೋವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದು ನಾನು ನಾಯಕಿಯಾಗಿ ನಟಿಸಿರುವ ಐದನೇ ಚಿತ್ರ ಎಂದರು. ಇವರು ಜೊತೆ ನಾಗೇಂದ್ರ ಅರಸ್, ಅಶ್ವಿನ್ ಹಾಸನ್, ಶುಭಲಕ್ಷ್ಮೀ, ಗೌತಮ್ ಮುಂತಾದವರು ಕಾಂಗರೂ ಚಿತ್ರದಲ್ಲಿ ನಟಿಸಿದ್ದಾರೆ.

ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ.

  • " class="align-text-top noRightClick twitterSection" data="">

ಇವರಲ್ಲಿ ಚನ್ನಕೇಶವ ಮಾತನಾಡಿ, ನಾವು ಆರು ಜನ ಸ್ನೇಹಿತರು. ನಾವೆಲ್ಲಾ ಸಣ್ಣ ಕೈಗಾರಿಕೋದ್ಯಮಿಗಳು. ಪೀಣ್ಯದಲ್ಲಿ ನಮ್ಮ ಫ್ಯಾಕ್ಟರಿ ಇದೆ. ಸಿನಿಮಾ ರಂಗ ನಮಗೆ ಹೊಸತು. ಸ್ನೇಹಿತರ ಮೂಲಕ ಪರಿಚಿತರಾದ ನಿರ್ದೇಶಕ ಕಿಶೋರ್ ಅವರು ಈ ಚಿತ್ರದ ಕಥೆ ಹೇಳಿದ ರೀತಿ ನಮಗೆ ಇಷ್ಟವಾಯಿತು. ಚಿತ್ರ ನಿರ್ಮಾಣಕ್ಕೆ ಮುಂದಾದೆವು. ನಟ ಆದಿತ್ಯ ಹಾಗೂ ಚಿತ್ರ ತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ. ಚಿತ್ರಕ್ಕೆ ಸಾಧುಕೋಕಿಲ ಅವರ ಸಂಗೀತ ನಿರ್ದೇಶನ ಹಾಗೂ ಉದಯಲೀಲಾ ಅವರ ಛಾಯಾಗ್ರಹಣ ಹೈಲೆಟ್. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಮೇ 3 ರಂದು ನಿಮ್ಮ ಮುಂದೆ ಬರಲಿದೆ ಎಂದರು.

ಇದನ್ನೂ ಓದಿ: ಮತ್ತೆ ಕಾಂಗರೂ ಸಿನಿಮಾದಲ್ಲಿ ಖಾಕಿ ತೊಟ್ಟು ಅಬ್ಬರಿಸಲಿರುವ ನಟ ಆದಿತ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.