ಕಾರವಾರ: ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ಮಂದಿರಕ್ಕೆ ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುವಾರ ಆಗಮಿಸಿ ಆತ್ಮಲಿಂಗದ ದರ್ಶನ ಪಡೆದುಕೊಂಡರು.
ಕುಟುಂಬಸಮೇತರಾಗಿ ಆಗಮಿಸಿದ ಅವರು ಮೊದಲು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮಹಾಬಲೇಶ್ವರ ದೇವಾಲಯಕ್ಕೆ ತೆರಳಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಬಳಿಕ ತಾಮ್ರಗೌರಿ, ಸ್ಮಶಾನಕಾಳಿ ದೇವಾಲಯಕ್ಕೆ ತೆರಳಿ ದೇವಿ ದರ್ಶನ ಪಡೆದರು. ದೇಗುಲದ ವತಿಯಿಂದ ಸ್ಮರಣಿಕೆ, ಪ್ರಸಾದ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: 'ಕೋಟಿ' ಟ್ರೇಲರ್ಗೆ ಸಿನಿಪ್ರಿಯರು ಫಿದಾ: ಮುಂದಿನ ಶುಕ್ರವಾರ ಡಾಲಿ ಸಿನಿಮಾ ತೆರೆಗೆ - Kotee Trailer