ETV Bharat / entertainment

"ಫ್ಯಾಮಿಲಿ ಡ್ರಾಮ" ಮೆಚ್ಚಿದ ಡಾಲಿ ಧನಂಜಯ್ - family drama - FAMILY DRAMA

ಆಕರ್ಷ್‌ ಮೊದಲ ನಿರ್ದೇಶನದ ಸಿನಿಮಾ "ಫ್ಯಾಮಿಲಿ ಡ್ರಾಮ" ದ ಟ್ರೈಲರ್ ಬಿಡುಗಡೆಯಾಗಿದ್ದು, ನಟ ಧನಂಜಯ್ ನೋಡಿ ಮೆಚ್ಚಿಕೊಂಡು ತಮ್ಮ ಬೆಂಬಲ ನೀಡಿದ್ದಾರೆ.

ಫ್ಯಾಮಿಲಿ ಡ್ರಾಮ
ಫ್ಯಾಮಿಲಿ ಡ್ರಾಮ
author img

By ETV Bharat Karnataka Team

Published : Apr 29, 2024, 2:28 PM IST

ಚುನಾವಣಾ ಬಿಸಿಯ ನಡುವೆಯೂ "ಫ್ಯಾಮಿಲಿ ಡ್ರಾಮ"ವೊಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕನ್ನಡ ಸಿನಿಮಾ ರಂಗದಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾವೇ ಈ ಫ್ಯಾಮಿಲಿ ಡ್ರಾಮ. ಸದ್ಯ ಸಿನಿಮಾತಂಡ ಟ್ರೈಲರ್ ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಚಿತ್ರವನ್ನು ಮಾಡಿದ್ದಾರೆ.

ಫ್ಯಾಮಿಲಿ ಡ್ರಾಮ
ಫ್ಯಾಮಿಲಿ ಡ್ರಾಮ

ಕ್ರಿಯೇಟಿವ್​ ಆಗಿ ಮೂಡಿ ಬಂದಿರುವ ಈ ಟ್ರೈಲರ್​ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ವಿಭಿನ್ನ ಸಿನಿಮಾದ ಕಂಟೆಂಟ್ ಜೊತೆಗೆ ಟೆಕ್ನಿಕಲ್ ವಿಚಾರಗಳನ್ನು ಒಳಗೊಂಡಿರುವ ಫ್ಯಾಮಿಲಿ ಡ್ರಾಮ ಚಿತ್ರದ ಟ್ರೈಲರ್​ನ್ನು ನಟ ಧನಂಜಯ್ ನೋಡಿ ಮೆಚ್ಚಿಕೊಂಡು ಈ ಯುವ ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ.

ಯುವ ಪ್ರತಿಭೆ ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾವಾಗಿದೆ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ಕಾಂತಾರ ಸ್ಚಾರ್ ರಿಷಬ್ ಶೆಟ್ಟಿ ಅವರ ಟೀಮ್‌ನಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ ಇವರು. ಸದ್ಯ ರಿಲೀಸ್‌ಗೆ ರೆಡಿಯಾಗಿರುವ ಲಾಫಿಂಗ್ ಬುದ್ಧ ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜೊತೆಗೆ ಒಂದಿಷ್ಟು ಶಾರ್ಟ್ ಫಿಲ್ಮ್‌ಗಳನ್ನು ಮಾಡಿದ್ದಾರೆ.

ಫ್ಯಾಮಿಲಿ ಡ್ರಾಮ
ಫ್ಯಾಮಿಲಿ ಡ್ರಾಮ

ಇನ್ನೂ ಈ ಸಿನಿಮಾದಲ್ಲಿ ಆಚಾರ್ ಆಂಡ್ ಕೋ ಸಿನಿಮಾದ ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ, ಡೇರ್ ಡೆವಿಲ್ ಮುಸ್ತಾಫ ಸಿನಿಮಾದಲ್ಲಿ ನಟಿಸಿರುವ ಅಭಯ್, ಪೂರ್ಣ ಮೈಸೂರು ಹಾಗೂ ಅನನ್ಯ ಅಮರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ಆಚಾರ್ ಅಂಡ್ ಕೋ ಬಳಿಕ ಸಿಂಧು ಒಪ್ಪಿಕೊಂಡ ಚಿತ್ರ ಇದಾಗಿದೆ. ಫ್ಯಾಮಿಲಿ ಡ್ರಾಮ ಡಾರ್ಕ್ ಕಾಮಿಡಿ ಸಿನಿಮಾ. ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯೇ ಫ್ಯಾಮಿಲಿ ಡ್ರಾಮ. ಸಾಕಷ್ಟು ಹೊಸತನದೊಂದಿಗೆ, ವಿಭಿನ್ನವಾಗಿ, ಕ್ರಿಯೇಟಿವ್​ ಆಗಿ ಸಿನಿಮಾ ಮಾಡಿದ್ದಾರೆ ನಿರ್ದೇಶಕ ಆಕರ್ಷ್ ಅಂಡ್ ಟೀಂ.

ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಚರ್ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್​ನ ಕ್ರಿಯೇಟಿವ್​ ಡಿಸೈನರ್ ಬಳಿ ಫ್ಯಾಮಿಲಿ ಡ್ರಾಮ ಚಿತ್ರದ ಪೋಸ್ಟರ್​ ಅನ್ನು ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು. ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಆರ್​. ಚಂದ್ರು ನಿರ್ಮಾಣದ 'ಫಾದರ್' ಸಿನಿಮಾಗೆ ಕರುನಾಡ ಚಕ್ರವರ್ತಿಯ ಸಪೋರ್ಟ್ - Father kannada movie

ETV Bharat Logo

Copyright © 2025 Ushodaya Enterprises Pvt. Ltd., All Rights Reserved.