ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತಿವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಕೆರೆಬೇಟೆ ಎಂದು ಟೈಟಲ್ ಇಡಲಾಗಿದೆ. ಈ ಹಿಂದೆ ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ನಾಯಕನಾಗಿ ಮಿಂಚಿದ್ದ ಗೌರಿ ಶಂಕರ್ ಈ ಬಾರಿ ಪಕ್ಕಾ ಮಾಸ್ ಅವತರಾದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗ್ಲೇ ಕೆರೆಬೇಟೆ ಚಿತ್ರ ಟೀಸರ್ ಹಾಗು ಹಾಡುಗಳಿಂದ ಸ್ಯಾಂಡಲ್ವುಡ್ನಲ್ಲಿ ಟಾಕ್ ಆಗುತ್ತಿದೆ. ಸದ್ಯ ಕಂಟೆಂಟ್ ನಿಂದ ಸೌಂಡ್ ಮಾಡುತ್ತಿರುವ ಕೆರೆಬೇಟೆ ಚಿತ್ರಕ್ಕೆ ಈಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ಸಿಕ್ಕಿದೆ.
ಕಿಚ್ಚ ಸುದೀಪ್ ತಮ್ಮ ಗೆಳೆಯರು ಸೇರಿದಂತೆ ಹೊಸ ಪ್ರತಿಭೆಗಳಿಗೆ ಸದಾ ಸಪೋರ್ಟ್ ಮಾಡುತ್ತಲೇ ಇರುತ್ತಾರೆ. ಈಗ ಗೌರಿ ಶಂಕರ್ ನಟಿಸಿರುವ ಸಿನಿಮಾ ಹಾಗು ರಾಜ್ ಗುರು ಆ್ಯಕ್ಷನ್ ಕಟ್ ಹೇಳಿರುವ ಕೆರೆಬೇಟೆ ಚಿತ್ರದ ಟ್ರೈಲರ್ ಅನ್ನು ಕಿಚ್ಚ ಸುದೀಪ್ ಅನಾವರಣ ಮಾಡುವ ಮೂಲಕ ಹೊಸ ತಂಡಕ್ಕೆ ಸಪೋರ್ಟ್ ಮಾಡಲಿದ್ದಾರೆ. ಇದೇ 20ರಂದು ಬೆಂಗಳೂರಿನ ನಂದಿಲಿಂಕ್ ಗ್ರೌಂಡ್ನಲ್ಲಿ ಕೆರೆಬೇಟೆ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ದಿನಕರ್ ತೂಗುದೀಪ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಕೆರೆಬೇಟೆ ರಾಜ್‌ಗುರು ಸಾರಥ್ಯದಲ್ಲಿ ಮೂಡಿ ಬರ್ತೀರೋ ಸಿನಿಮಾ. ಇದು ರಾಜ್‌ಗುರು ಅವರ ಮೊದಲ ಸಿನಿಮಾವಾಗಿದೆ. ಕಳೆದ 10 ವರ್ಷಗಳಿಂದ ಕನ್ನಡ ಸಿನಿಮಾರಂಗದಲ್ಲಿ ಎ.ಆರ್ ಬಾಬು, ಪವನ್ ಒಡೆಯರ್ ಹಾಗೂ ಇತರೆ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ರಾಜ್ ಗುರು ಅವರಿಗಿದೆ. ಇದೀಗ ಕೆರೆಬೇಟೆ ಎನ್ನುವ ವಿಭಿನ್ನ ಕಾನ್ಸೆಪ್ಟ್‌ನ ಸಿನಿಮಾ ಮೂಲಕ ಸಿನಿ ಪ್ರಿಯರ ಮುಂದೆ ಬರ್ತಿದ್ದಾರೆ.
ಕೆರೆಬೇಟೆ ಎಂದರೆ ಮಲೆನಾಡ ಭಾಗದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಮಲೆನಾಡ ಭಾಗದಲ್ಲಿ ವರ್ಷಕ್ಕೊಮ್ಮೆ ಕೆರೆಬೇಟೆಯಾಡುತ್ತಾರೆ. ಇದು ದೊಡ್ಡ ಕೆರೆಗಳಲ್ಲಿ ನಡೆಯುತ್ತದೆ. ಇದೇ ಈ ಸಿನಿಮಾದ ಮುಖ್ಯ ಎಳೆಯಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು, ಮಲೆನಾಡ ಭಾಗದ ಕೆರೆಬೇಟೆಯನ್ನು ಸಿನಿಮಾ ಮೂಲಕ ಕಟ್ಟಿಕೊಡುತ್ತಿದ್ದಾರೆ ನಿರ್ದೇಶಕ ರಾಜ್ ಗುರು ಮತ್ತು ನಾಯಕ ಗೌರಿ ಶಂಕರ್. ಕೆರೆಬೇಟೆ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.
ಈ ಚಿತ್ರಕ್ಕೆ ಜೈ ಶಂಕರ್ ಪಟೇಲ್ ಹಾಗೂ ನಾಯಕ ಗೌರಿ ಶಂಕರ್ ಇಬ್ಬರೂ ತಮ್ಮ ಜನಮನ ಸಿನಿಮಾ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಕೆರೆಬೇಟೆ ಸಿನಿಮಾದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ಬ್ಯುಸಿಯಾಗಿದೆ. ಸದ್ಯ ಟೀಸರ್ ಹಾಗು ಈ ಹಾಡಿನ ಮೂಲಕ ಸಿನಿ ಪ್ರಿಯರಲ್ಲಿ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಸಿನಿಮಾ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.
ಇದನ್ನೂ ಓದಿ: ನಾಯಕನಾಗಿ 25ನೇ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಕೋಮಲ್ ಕುಮಾರ್