ETV Bharat / entertainment

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಕಾಂತಾರ ನಟ ಕಿಶೋರ್ ಕುಮಾರ್ - KISHORE KUMAR

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಜಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

Kishore Kumar
ನಟ ಕಿಶೋರ್ ಕುಮಾರ್ ಜಿ (Photo: ETV Bharat)
author img

By ETV Bharat Entertainment Team

Published : Jan 9, 2025, 5:46 PM IST

ಬೆಂಗಳೂರು: 2024-25ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಜಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಪ್ರತೀ ವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದೆ. ಅದರಂತೆ ಪ್ರಸಕ್ತ 2024-25ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿದೆ.

Govt statement
ಸರ್ಕಾರದ ಹೇಳಿಕೆ (Photo: Govt statement)

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿನ ನಿರ್ಣಯದನ್ವಯ ಈ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಏರ್ಪಡಿಸಲಾಗಿದ್ದು, ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಮಾರ್ಚ್ 1ರಂದು ಮತ್ತು ಮಾರ್ಚ್ 8ರ‌ಂದು ಸಮಾರೋಪ ಸಮಾರಂಭ ನಡೆಯಲಿದೆ. ಈ ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರಕ್ಕಾಗಿ ಹಿಂದಿ ಮತ್ತು ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿರುವ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಜಿ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಡಿಯೋ: ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಹರ್ಷಿಕಾ ಪೂಣಚ್ಚ ಭುವನ್​ ಪೊನ್ನಣ್ಣ

ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಸೇರಿ ಚಿತ್ರರಂಗಕ್ಕೆ ಪೂರಕವಾಗಿ ಇನ್ನಿತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 'ಸರ್ವ ಜನಾಂಗದ ಶಾಂತಿಯ ತೋಟ' ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕ ಕಾಡ್ಗಿಚ್ಚು: ಆಸ್ಕರ್​ ನಾಮನಿರ್ದೇಶನ ಪ್ರಕಟಣೆ ಮುಂದೂಡಿಕೆ; ರೇಸ್​ನಲ್ಲಿದೆ ಭಾರತದ 5 ಸಿನಿಮಾಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.