ದೇವನಹಳ್ಳಿ(ಬೆಂ.ಗ್ರಾಮಾಂತರ): ಅನಾರೋಗ್ಯ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತವರಿಗೆ ಮರಳಿದ್ದಾರೆ. ಶಿವಣ್ಣನ ಅಭಿಮಾನಿಗಳು ಕೇಕ್ ಕಟ್ ಮಾಡಿ ಸಂಭ್ರಮಿಸಿದರು.
ಆರೋಗ್ಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶಿವರಾಜ್ ಕುಮಾರ್ ಪತ್ನಿ ಗೀತಾ, ಪುತ್ರಿ ನಿವೇದಿತಾ ಜೊತೆ ಇಂದು ಬೆಳಗ್ಗೆ 8.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗಣರಾಜ್ಯೋತ್ಸವ ಹಿನ್ನೆಲೆ ಹೈಅಲರ್ಟ್ ಘೋಷಣೆ ಮಾಡಿರುವುದರಿಂದ ಏರ್ಪೋರ್ಟ್ನಲ್ಲಿ ಅದ್ಧೂರಿ ಸ್ವಾಗತಕ್ಕೆ ಅವಕಾಶ ಇಲ್ಲ. ಈ ಕಾರಣದಿಂದ ಸಾದಹಳ್ಳಿ ಗೇಟ್ ಬಳಿ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು. ಸಾದಹಳ್ಳಿ ಗೇಟ್ನಿಂದ ಅವರನ್ನು ನಾಗವಾರದ ಮನೆವರೆಗೂ ಮೆರವಣಿಗೆ ಮಾಡುವ ಸಾಧ್ಯತೆ ಇದೆ.
ಕಳೆದೊಂದು ತಿಂಗಳಿಂದ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ ಶಿವರಾಜ್ ಕುಮಾರ್ ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಇಂದು ತವರಿಗೆ ಮರಳುತ್ತಿದ್ದಾರೆ.
ಇದನ್ನೂ ಓದಿ: ಕರುನಾಡ ಚಕ್ರವರ್ತಿ ಇಂದು ಕರುನಾಡಿಗೆ: ಶಿವಣ್ಣನ ಸ್ವಾಗತಕ್ಕೆ ಭರದ ಸಿದ್ಧತೆ