ETV Bharat / entertainment

ನಟ ಕಿಚ್ಚ ಸುದೀಪ್​​ಗೆ ಮಾತೃ ವಿಯೋಗ - SUDEEP MOTHER PASSED AWAY

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಇಂದು ಮುಂಜಾನೆ ನಿಧನರಾಗಿದ್ದಾರೆ.

sudeep mother
ಅಮ್ಮನೊಂದಿಗೆ ಸುದೀಪ್​ (Sudeep X Post)
author img

By ETV Bharat Karnataka Team

Published : Oct 20, 2024, 11:57 AM IST

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (75) ಇಂದು ಮುಂಜಾನೆ ನಿಧನರಾದರು. ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಸರೋಜಾ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ತಡರಾತ್ರಿ ಉಸಿರಾಟದ ತೊಂದರೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಿಚ್ಚ ಸುದೀಪ್​​ ತಾಯಿ ನಿಧನ (ETV Bharat)

ವೈದ್ಯರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಜೆಪಿ ನಗರದಲ್ಲಿರುವ ಸುದೀಪ್ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಪುತ್ರ ವಿನಯ್ ರಾಜಕುಮಾರ್, ನಟಿ ತಾರಾ ಅನುರಾಧ, ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ, ನಿರ್ಮಾಪಕ ಸಾರಾ ಗೋವಿಂದು, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ನಿರ್ದೇಶಕ ತರುಣ್ ಸುಧೀರ್ ಹಾಗೂ ಮಾಜಿ ಸಚಿವ ರಾಜುಗೌಡ ಸೇರಿದಂತೆ ಹಲವರು ಆಗಮಿಸಿ ಸರೋಜಾ ಅವರ ಅಂತಿಮ ದರ್ಶನ ಪಡೆದರು.

''ಸುದೀಪ್ ತಾಯಿ ನಮ್ಮ ತಾಯಿ ಇದ್ದಂತೆ. ಸರೋಜಮ್ಮ ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದರು. ನಾವು ಅವರ ಆಶೀರ್ವಾದ ಪಡೆಯುತ್ತಿದ್ದೆವು. ಸುದೀಪ್ ಅವರನ್ನು ನೆನಪಿಸಿಕೊಂಡರೆ ತುಂಬಾ ಬೇಜಾರಾಗುತ್ತದೆ. ದೇವರು ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ'' ಎಂದು ನಟ ರಾಘವೇಂದ್ರ ರಾಜಕುಮಾರ್ ಪ್ರತಿಕ್ರಿಯಿಸಿದರು.

ಸಂಸದ ಬೊಮ್ಮಾಯಿ ಸಂತಾಪ: ಸುದೀಪ್ ಅವರ ತಾಯಿಯ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ. ''ಖ್ಯಾತ ಚಲನಚಿತ್ರ ನಟ ಹಾಗೂ ಆತ್ಮೀಯರಾದ ಸುದೀಪ್​ ಅವರ ತಾಯಿ ಶ್ರೀಮತಿ ಸರೋಜಾ ಅವರು ನಿಧನರಾಗಿರುವ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ. ನಟ ಸುದೀಪ್ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ತಾಯಿಯ ನಿಧನದ ದುಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ''' ಎಂದು ಬೊಮ್ಮಾಯಿ ತಮ್ಮ X ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಪ್ರಾಮಾಣಿಕತೆ ಎಂಬ ಪದವೇ ಸೂಟ್ ಆಗೋಲ್ಲ: ಸ್ಪರ್ಧಿಗಳಿಗೆ ಬಿಸಿ ಮುಟ್ಟಿಸಿದ ಕಿಚ್ಚ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.