ETV Bharat / entertainment

ಬಿಗ್​ ಬಾಸ್​​ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ: ಅಭಿಮಾನಿಗಳಿಗೆ ಬಿಗ್​ ಶಾಕ್​ - BIGG BOSS KANNADA

ಬಿಗ್ ಬಾಸ್ ಕನ್ನಡ ಶೋ 11ನೇ ಸೀಸನ್​​ನ ಮೂರನೇ ವಾರಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಈ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಅವರಿಂದ ಶಾಕಿಂಗ್​ ನಿರ್ಧಾರ ಹೊರಬಿದ್ದಿದೆ.

sudeep
ಸುದೀಪ್ (ETV Bharat)
author img

By ETV Bharat Entertainment Team

Published : Oct 14, 2024, 6:59 AM IST

ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ನಡೆಯುತ್ತಿದೆ. ಇದೀಗ ಕಾರ್ಯಕ್ರಮವು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ, ನಟ ಕಿಚ್ಚ ಸುದೀಪ್ ದೊಡ್ಡದೊಂದು ಘೋಷಣೆ ಮಾಡಿದ್ದಾರೆ.

ಕಿಚ್ಚ ಸುದೀಪ್ ಬಿಗ್ ಬಾಸ್​​ಗೆ ವಿದಾಯ ಹೇಳಲು ಮುಂದಾಗಿದ್ದಾರೆ. 11ನೇ ಸೀಸನ್​ ಆರಂಭಕ್ಕೂ ಮುನ್ನವೇ ಈ ಬಗ್ಗೆ ಹಲವು ಚರ್ಚೆ, ಸುದ್ದಿಗಳು ಹರಿದಾಡಿದ್ದವು. ಈ ಬಾರಿ ಸುದೀಪ್ ನಿರೂಪಣೆ ಮಾಡುತ್ತಿಲ್ಲ. ಬೇರೊಬ್ಬರು ಈ ಜವಾಬ್ದಾರಿ ಹೊತ್ತುಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಮತ್ತೊಮ್ಮೆ ನಿರೂಪಣೆಯನ್ನು ಸುದೀಪ್​ ಅವರೇ ಮಾಡುತ್ತಿದ್ದರು. ಆದರೀಗ ಬಿಗ್ ಬಾಸ್ ನಿರೂಪಣೆಯಿಂದ ದೂರ ಸರಿಯುವುದಾಗಿ ಸುದೀಪ್​ ಘೋಷಿಸಿದ್ದಾರೆ.

ಇದನ್ನೂ ಓದಿ: ದರ್ಶನ್​​ ಭೇಟಿಗಾಗಿ ಟೆಡ್ಡಿಬೇರ್​ ಧರಿಸಿ ಬಳ್ಳಾರಿ ಜೈಲಿಗೆ ಬಂದ ಶಿವಮೊಗ್ಗದ ಅಭಿಮಾನಿ

''ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿದ ಪ್ರೀತಿ ಏನೆಂಬುದು ತಿಳಿಯುತ್ತೆ. ಈ 11 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಬಹಳ ಅದ್ಭುತವಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನಹರಿಸುವ ಸಮಯ ಬಂದಿದೆ'' ಎಂದಿದ್ದಾರೆ.

ಇದು ಬಿಗ್ ಬಾಸ್ ಕನ್ನಡಕ್ಕೆ ನಿರೂಪಕನಾಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ನಿರ್ಧಾರವನ್ನು ಕಲರ್ಸ್​ನವರು ಹಾಗೂ ಇಷ್ಟು ವರ್ಷಗಳಿಂದ ಬಿಗ್ ಬಾಸ್ ನೋಡಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬಿದ್ದೇನೆ. ಈ ಸೀಸನ್ ಅತ್ಯುತ್ತಮ ಆಗುವಂತೆ ಮಾಡೋಣ. ನಾನು ಕೂಡ ನಿಮ್ಮೆಲ್ಲರನ್ನು ರಂಜಿಸುತ್ತೇನೆ'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 'ಫಸ್ಟ್ ಬಾಲ್​ನಲ್ಲಿ ಸಿಕ್ಸರ್ ಹೊಡೆದವರು ನಾವು': ಅ.16ಕ್ಕೆ 'ಮಾಫಿಯಾ' ನಿಮ್ಮ ಮುಂದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.