ETV Bharat / entertainment

ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ನಟಿ ರಚಿತಾ ರಾಮ್​ - Rachita Ram Apology - RACHITA RAM APOLOGY

ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿ ನಟಿ ರಚಿತಾ ರಾಮ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

Actress Rachita Ram
ನಟಿ ರಚಿತಾ ರಾಮ್​ (ETV Bharat)
author img

By ETV Bharat Entertainment Team

Published : Oct 1, 2024, 4:51 PM IST

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ರಚಿತಾ ರಾಮ್​ ಅವರಿಂದು ಸೋಷಿಯಲ್​ ಮೀಡಿಯಾ ಪೋಸ್ಟ್ ಮೂಲಕ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ. ಅಕ್ಟೋಬರ್​ 3ರಂದು ನಟಿ 32ನೇ ವಸಂತಕ್ಕೆ ಕಾಲಿಡಲಿದ್ದಾರೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹಾಗಾಗಿ, ತಮ್ಮ ಫ್ಯಾನ್ಸ್​ ಬಳಿ ಕ್ಷಮೆ ಕೋರಿದ್ದಾರೆ. ​

ಈ ಬಗ್ಗೆ ರಚಿತಾ ರಾಮ್​​ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದಾರೆ. ಸೀರೆಯುಟ್ಟು, ಅದಕ್ಕೆ ತಕ್ಕ ಆಭರಣ ತೊಟ್ಟು, ಹಣೆಗೆ ಬಿಂದಿ ಇಟ್ಟು, ಮಲ್ಲಿಗೆ ಮುಡಿದು ಸಾಂಪ್ರದಾಯಿಕ ನೋಟದಲ್ಲಿ ಬಹಳ ಸೊಗಸಾಗಿ ಕಾಣಿಸಿಕೊಂಡಿರುವ ಫೋಟೋವನ್ನು ಈ ಪೋಸ್ಟ್ ಒಳಗೊಂಡಿದೆ.

ಜೊತೆಗೆ ಫೋಟೋ ಮೇಲೆ, 'ಎಲ್ಲರಿಗೂ ನಮಸ್ಕಾರ. ಎಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತಾ, ಈ ಬಾರಿ ಚಿತ್ರೀಕರಣ ಇರುವುದರಿಂದ ನನ್ನ ಹುಟ್ಟುಹಬ್ಬ (ಅಕ್ಟೋಬರ್ 3) ಆಚರಣೆಯನ್ನು ನಾನು ಮಾಡಿಕೊಳ್ಳುತ್ತಿಲ್ಲ ಎಂದು ಹೇಳಲು ಇಚ್ಚಿಸುತ್ತೇನೆ. ಎಲ್ಲರಿಗೂ ಕ್ಷಮೆ ಯಾಚಿಸುತ್ತಾ, ಎಂದಿನಂತೆ ಪ್ರತೀ ಭಾನುವಾರ ಚಿತ್ರೀಕರಣ ಮುಗಿಸಿ ಬಂದ ನಂತರ ಸಿಗುತ್ತೇನೆ.' - ನಿಮ್ಮ ಪ್ರೀತಿಯ ರಚ್ಚು ಎಂದು ಬರೆದುಕೊಂಡಿದ್ದಾರೆ. ಪೋಸ್ಟ್​​ಗೆ ಲವ್​ ಯೂ ಆಲ್​​ ಎಂಬ ಕ್ಯಾಪ್ಷನ್​​ ಕೊಟ್ಟಿದ್ದಾರೆ.

ಕಳೆದ ವರ್ಷ ಕನ್ನಡಿಗರು ಕಾವೇರಿಗಾಗಿ ಹೋರಾಟ ಮಾಡುತ್ತಿದ್ದ ಹಿನ್ನೆಲೆ ರಚಿತಾ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಈ ಬಗ್ಗೆ ಸೋಷಿಯಲ್​ ಮೀಡಿಯಾ ಪೋಸ್ಟ್ ಶೇರ್ ಮಾಡಿದ್ದ ನಟಿ, 'ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಈ ವರ್ಷ ನನ್ನ ಹುಟ್ಟುಹಬ್ಬ ಆಚರಿಸುವುದು ಸೂಕ್ತವಲ್ಲ ಎಂದನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ' ಎಂದು ತಿಳಿಸಿದ್ದರು.

ರಚಿತಾ ರಾಮ್​​ 1992ರ ಅಕ್ಟೋಬರ್ 3ರಂದು ಬೆಂಗಳೂರಿನಲ್ಲಿ ಜನಿಸಿದರು. ಗುರುವಾರ 32ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. 'ಅರಸಿ' ಸಿರಿಯಲ್​ ಮೂಲಕ ಜನಪ್ರಿಯರಾದ ರಚಿತಾ ಅವರು ದರ್ಶನ್ ಅವರ 'ಬುಲ್​ ಬುಲ್​​' ಚಿತ್ರದ ಮೂಲಕ ಕನ್ನಡ ಹಿರಿತೆರೆ ಪ್ರವೇಶಿಸಿದರು. ಚೊಚ್ಚಲ ಚಿತ್ರದಲ್ಲೇ ಸ್ಟಾರ್ ನಟನೊಂದಿಗೆ ತೆರೆ ಹಂಚಿಕೊಂಡ ನಟಿ, ನಂತರದ ದಿನಗಳಲ್ಲಿ ಹಲವು ಸೂಪರ್ ಸ್ಟಾರ್​ಗಳೊಂದಿಗೆ ಅಭಿನಯಿಸಿ ಮತ್ತಷ್ಟು ಜನಪ್ರಿಯರಾದರು.

ಇದನ್ನೂ ಓದಿ: ಇಂದು ಸಂಜೆ ದಳಪತಿ ವಿಜಯ್​ ಕೊನೆಯ ಸಿನಿಮಾದ ನಟರ ಹೆಸರು ಘೋಷಿಸಲಿದೆ ಕನ್ನಡದ 'ಕೆವಿಎನ್​​' - Thalapathy 69

ದಿಲ್ ರಂಗೀಲಾ, ರನ್ನ, ರಥಾವರ, ಚಕ್ರವ್ಯೂಹ, ಲವ್​ ಯೂ ರಚ್ಚು, ಕ್ರಾಂತಿ ಸೇರಿದಂತೆ ಹಲವು ಚಿತ್ರಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ. ಕನ್ನಡದ ರಿಯಾಲಿಟಿ ಶೋಗಳಾದ ಕಾಮಿಡಿ ಟಾಕೀಸ್, ಮಜಾಭಾರತ 2, ಸೂಪರ್​ ಕ್ವೀನ್, ಭರ್ಜರಿ ಬ್ಯಾಚುಲರ್ಸ್​ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿಯೂ ಕೆಲಸ ಮಾಡಿದ್ದಾರೆ. ಜೊತೆಗೆ, ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರದ ಬಿಡುಗಡೆಗೂ ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ತಾರಕಕ್ಕೇರಿದ ಮೊದಲ ನಾಮಿನೇಶನ್‍ ತಾಪ; ಸ್ಪರ್ಧಿಗಳ ನಡುವೆ ವಾದ ವಿವಾದ: ನಿಮ್ಮ ಪ್ರಕಾರ ಯಾರಾಗ್ತಾರೆ ನಾಮಿನೇಟ್​? - Bigg Boss Kannada 11

'ಸಂಜು ವೆಡ್ಸ್ ಗೀತಾ 2' ನಟಿಯ ಮುಂದಿನ ಬಹುನಿರೀಕ್ಷಿತ ಚಿತ್ರ. ನಾಗಶೇಖರ್ ನಿರ್ದೇಶನದ ಈ ಚಿತ್ರದಲ್ಲಿ ರಚಿತಾ ರಾಮ್ ಜೊತೆ ಶ್ರೀನಗರ ಕಿಟ್ಟಿ ಅಭಿನಯಿಸಿದ್ದಾರೆ. ಪೋಸ್ಟ್ ಪ್ರೊಡಕ್ಷನ್​ ಕೆಲಸಗಳು ಸಾಗಿದ್ದು, ಶೀಘ್ರ ಬಿಡುಗಡೆಗೆ ಚಿತ್ರತಂಡ ತಯಾರಿ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.