ETV Bharat / entertainment

'ಕಾಲಾಯ ತಸ್ಮೈ ನಮಃ': ದರ್ಶನ್​​ ಬೇಲ್​ ಬೆನ್ನಲ್ಲೇ ನಟಿ ರಚಿತಾ ರಾಮ್​ ಹೇಳಿದ್ದಿಷ್ಟು

ದರ್ಶನ್​​ ಮಧ್ಯಂತರ ಜಾಮೀನಿನ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯಿಸಿದ್ದಾರೆ.

Rachita Ram - Darshan
ರಚಿತಾ ರಾಮ್ - ದರ್ಶನ್ (ETV Bharat)
author img

By ETV Bharat Entertainment Team

Published : 4 hours ago

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ. ಹೈಕೋರ್ಟ್ ಅವರಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ತಪಾಸಣೆಗಾಗಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ ಕೆಲ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ನಟಿ ರಚಿತಾ ರಾಮ್ ''ಬುಲ್ ಬುಲ್'' ಚಿತ್ರದ ಮೂಲಕ ಹಿರಿತೆರೆ ಪ್ರವೇಶಿಸಿದರು. ಈ ಸಿನಿಮಾದಲ್ಲಿ ದರ್ಶನ್​ ಜೊತೆ ತೆರೆಹಂಚಿಕೊಂಡಿದ್ದರು. ರಚಿತಾ ಅವರು, ದರ್ಶನ್​​ ಬಗ್ಗೆ ಸಾಕಷ್ಟು ಗೌರವ ಇಟ್ಟುಕೊಂಡಿದ್ದಾರೆ. ತಮ್ಮ ಗುರು ಎಂದೇ ಭಾವಿಸಿದ್ದಾರೆ. ಆದ್ರೆ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾರೆ ಅನ್ನೋ ವಿಷಯ ನಟಿಗೆ ನಂಬಲಾಗಿರಲಿಲ್ಲ. ಇದೀಗ ದರ್ಶನ್​ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ರಚಿತಾ ರಾಮ್​​ ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ವೆರಿ ಸಿಂಪಲ್​ ಪೋಸ್ಟ್​ ಶೇರ್​​ ಮಾಡಿದ್ದಾರೆ. ಅದರಲ್ಲಿ ನಟಿ 'ಕಾಲಾಯ ತಸ್ಮೈ ನಮಃ' ಎಂದು ಖುದ್ದು ಹೇಳಿರುವ ದೃಶ್ಯವಿದೆ. ಹಿನ್ನೆಲೆಯಲ್ಲಿ ದರ್ಶನ್​ ಅವರ ಸೂಪರ್​ ಹಿಟ್ ಚಿತ್ರ 'ನವಗ್ರಹ'ದ ಫೇಮಸ್​​​ ಮ್ಯೂಸಿಕ್​ ಕೇಳಿಬಂದಿದೆ. ಈ ಮೂಲಕ ಡಿಂಪಲ್​ ಕ್ವೀನ್​​​ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 'ಟಾಕ್ಸಿಕ್' ಶೂಟಿಂಗ್ ಸ್ಪಾಟ್​​​ಗೆ ಸಚಿವ ಈಶ್ವರ್​ ಖಂಡ್ರೆ ಭೇಟಿ: ಮತ್ತೆ ಸಂಕಷ್ಟದಲ್ಲಿ ಯಶ್​ ಸಿನಿಮಾ

''ನಮಸ್ಕಾರ. ಈ ನೋಟ್‌ ಅನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ. ಇನ್ನು, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ'' - ರಚಿತಾ ರಾಮ್​ ಹಿಂದಿನ ಪೋಸ್ಟ್​.

ಇದನ್ನೂ ಓದಿ: ದರ್ಶನ್​​ಗೆ ಮಧ್ಯಂತರ ಜಾಮೀನು: ಹರ್ಷ ವ್ಯಕ್ತಪಡಿಸಿದ ನಿರ್ದೇಶಕ ನಂದಕಿಶೋರ್; ನಟನ ಮನೆ, ಕಾರು ಶುಚಿಗೊಳಿಸಿದ ಕೆಲಸಗಾರರು

ಈ ಹಿಂದೆ ಜೂನ್​ 18ರಂದು ಈ ಪೋಸ್ಟ್ ಶೇರ್​ ಮಾಡಿದ್ದ ನಟಿ 'ಧರ್ಮೋ ರಕ್ಷತಿ ರಕ್ಷಿತಃ' ಎಂಬ ಕ್ಯಾಪ್ಷನ್​ ಕೊಟ್ಟಿದ್ದರು. ದರ್ಶನ್​ ಬಿಡುಗಡೆಗಾಗಿ ಎದುರು ನೋಡುತ್ತಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.