ರಾಗಿಣಿ ದ್ವಿವೇದಿ, ಸ್ಯಾಂಡಲ್ವುಡ್ ಮಾತ್ರವಲ್ಲದೇ ಪರಭಾಷೆಯ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ತಾರೆ. ನಟನೆ ಜೊತೆ ಗ್ಲ್ಯಾಮರ್ನಿಂದ ತನ್ನದೇ ಬೇಡಿಕೆ ಹೊಂದಿರುವ ಚೆಲುವೆ. ಸ್ಯಾಂಡಲ್ವುಡ್ನ ಫಿಟ್ನೆಸ್ ಐಕಾನ್ ಅಂತಲೇ ಫೇಮಸ್. ಆದ್ರೀಗ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ಬಹುಭಾಷಾ ಸಿನಿಮಾಗಳಲ್ಲಿ ರಾಗಿಣಿ ದ್ವಿವೇದಿ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣ ಆಗುತ್ತಿರುವ "ಮದನಿಕ" ಶೀರ್ಷಿಕೆಯ ಚಿತ್ರದ ಚಿತ್ರೀಕರಣ ಸದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ರಾಗಿಣಿ ಅವರದ್ದು ಪ್ರಮುಖ ಪಾತ್ರ. ಬೆಂಗಳೂರು ಸ್ಟುಡಿಯೋಸ್ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಾಗಿಣಿ ಅವರ ಕಾಲಿಗೆ ಪೆಟ್ಟಾಗಿದೆ. ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ.
'ಮದನಿಕ' ಕ್ರೈಮ್ ಥ್ರಿಲ್ಲರ್ ಕಥೆಯಾಗಿದ್ದು, ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತುಪ್ಪದ ಬೆಡಗಿ ಎಂದೇ ಫೇಮಸ್ ಆಗಿರೋ ರಾಗಿಣಿಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ನಟಿಯ ಖ್ಯಾತಿ ದಿನೇ ದಿನೆ ಹೆಚ್ಚುತ್ತಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿದ್ದು, ತಮ್ಮ ಚೆಲುವಿನ ಚಿತ್ತಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಗಮನ ಸೆಳೆಯುತ್ತಿರುತ್ತಾರೆ.
ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್ಕುಮಾರ್ 'RCB' ವಿಡಿಯೋ ಅರ್ಥ ಆಯ್ತಾ?