ETV Bharat / entertainment

ವಿಕ್ರಮ್ ರವಿಚಂದ್ರನ್ ಮುಧೋಳ್ ಚಿತ್ರಕ್ಕೆ ಸಿಕ್ಕಳು ಸಲಗ ಸುಂದರಿ - actress Sanjana Anand - ACTRESS SANJANA ANAND

ದುನಿಯಾ ವಿಜಯ್ ಸಾರಥ್ಯದ‌ 'ಸಲಗ‌' ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ನಟಿ ಸಂಜನಾ ಆನಂದ್ ಅವರು ಇದೀಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ.

Mudhol movie poster
ಮುಧೋಳ್ ಸಿನಿಮಾ ಪೋಸ್ಟರ್
author img

By ETV Bharat Karnataka Team

Published : Mar 28, 2024, 6:17 PM IST

Updated : Mar 28, 2024, 7:18 PM IST

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್​ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. 'ಕೆಮಿಸ್ಟ್ರಿ ಆಫ್ ಕರಿಯಪ್ಪ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಆನಂದ್ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡರು.

ದುನಿಯಾ ವಿಜಯ್ ಸಾರಥ್ಯದ‌ 'ಸಲಗ‌' ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್, ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ.

Actress Sanjana Anand
ನಟಿ ಸಂಜನಾ ಆನಂದ್

ಹೌದು, ತ್ರಿವಿಕ್ರಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಮುಧೋಳ್ ಮೂಲಕ ಸಖತ್‌ ಮಾಸ್ ಅವತಾರ ತಾಳಿರುವ ವಿಕ್ಕಿಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸುತ್ತಿದ್ದಾರೆ.‌ ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷಯ ಹರಿದಾಡಿತ್ತು. ಆದ್ರೆ ಚಿತ್ರತಂಡ ಮಾತ್ರ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಸಲಗ ಸುಂದರಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ‌‌ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.

ವಿಕ್ರಮ್ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ.‌ ಇಲ್ಲಿಯವರೆಗೂ ಅವರು ನಟಿಸದ ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದ ಹಾಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

Actress Sanjana Anand
ನಟಿ ಸಂಜನಾ ಆನಂದ್

ಸಂಜನಾ ಆನಂದ್ ಮುಧೋಳ್ ಸಿನಿಮಾ ಜೊತೆಗೆ ದಿನಕರ್ ತೂಗುದೀಪ ನಿರ್ದೇಶನದ ರಾಯಲ್ ಹಾಗೂ ತೆಲುಗಿನ ಫುಲ್ ಬಾಟಲ್ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ಹಯಗ್ರೀವ್​ಗೂ ನಾಯಕಿಯಾಗಿರುವ ಸಂಜನಾ ಆನಂದ್ ಸದ್ಯ ಮೂರ್ನಾಲ್ಕು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ : ಡಿಂಪಲ್‌ ಕ್ವೀನ್‌ ಡೆವಿಲ್ ಲುಕ್​ಗೆ ಕಾಟೇರ ಫಿದಾ: ಮ್ಯಾಟ್ನಿ ಟ್ರೇಲರ್ ನೋಡಿದ್ರಾ? - Matinee Trailer

Last Updated : Mar 28, 2024, 7:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.