ಜೂನಿಯರ್ ಎನ್‌ಟಿಆರ್ - ಕೊರಟಾಲ ಶಿವ ಕಾಂಬಿನೇಷನ್ನ 'ದೇವರ' ಭಾರಿ ನಿರೀಕ್ಷೆಯ ಚಿತ್ರಗಳಲ್ಲೊಂದು. ನಿರ್ದೇಶಕ ಕೊರಟಾಲ ಶಿವ ಈ ಚಿತ್ರವನ್ನು ಎರಡು ಭಾಗಗಳಲ್ಲಿ ತರೋದಾಗಿ ಈಗಾಗಲೇ ತಿಳಿಸೋ ಮುಖೇನ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದ್ದಾರೆ. ಕರಾವಳಿ ಹಿನ್ನೆಲೆಯಲ್ಲಿ ಸಂಪೂರ್ಣ ಆ್ಯಕ್ಷನ್ ಎಂಟರ್‌ಟೈನರ್ ಆಗಿ ’ದೇವರ‘ ಮೂಡಿ ಬರಲಿದೆ.
![Another actress entry to 'Devara'](https://etvbharatimages.akamaized.net/etvbharat/prod-images/10-02-2024/20714777_asrw3estg.jpg)
ಇತ್ತೀಚೆಗಷ್ಟೇ ಚಿತ್ರ ನಿರ್ಮಾಪಕರು ಒಂದು ಗ್ಲಿಂಪ್ಸ್ ಅನಾವರಣಗೊಳಿಸಿ ಸಿನಿಪ್ರಿಯರ ಉತ್ಸಾಹಕ್ಕೆ ಕಾರಣರಾಗಿದ್ದರು. ದಿವಂಗತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಈ ಚಿತ್ರದ ಮೂಲಕ ಟಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಜಾಹ್ನವಿ ಇದೇ ಮೊದಲ ಬಾರಿ ಜೂನಿಯರ್ ಎನ್‌ಟಿಆರ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಮತ್ತೊಬ್ಬ ನಾಯಕಿ ಇರಲಿದ್ದಾರೆ.
- " class="align-text-top noRightClick twitterSection" data="">
ಬಹುನಿರೀಕ್ಷಿತ 'ದೇವರ' ಮೂಲಕ ತೆಲುಗು ಪ್ರೇಕ್ಷಕರಿಗೆ ಬಾಲಿವುಡ್ ನಟಿ ಮಾತ್ರವಲ್ಲ, ಮರಾಠಿ ನಟಿಯೊಬ್ಬರು ಕೂಡ ಪರಿಚಯವಾಗಲಿದ್ದಾರೆ. ಹೌದು, ಮರಾಠಿ ಬ್ಯೂಟಿ ಶ್ರುತಿ ಮರಾಟೆ ಈ ಸಿನಿಮಾದಲ್ಲಿ ಎರಡನೇ ನಾಯಕಿಯಾಗಿ ಬಣ್ಣ ಹಚ್ಚಲಿದ್ದಾರೆ. 'ದೇವರ' ಚಿತ್ರದಲ್ಲಿ ನಾಯಕ ನಟ ಜೂನಿಯರ್ ಎನ್‌ಟಿಆರ್ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್ ಒಂದು ಪಾತ್ರಕ್ಕೆ ನಾಯಕಿಯಾಗಿ ನಟಿಸಿದರೆ, ಎರಡನೇ ಪಾತ್ರಕ್ಕೆ ಶ್ರುತಿ ಮರಾಟೆ ಆಯ್ಕೆಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.
ಅದಾಗ್ಯೂ ಈ ಬಗ್ಗೆ ಅಧಿಕೃತ ಘೋಷಣೆ ನಿರೀಕ್ಷಿಸಲಾಗಿದೆ. ಮತ್ತೊಂದೆಡೆ, ಈ ವಿಷಯವನ್ನು ಜೂ. ಎನ್‌ಟಿಆರ್ ಫ್ಯಾನ್ಸ್ ಪೇಜ್ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಲ್ಲದೇ ಈ ಪೋಸ್ಟ್ಗೆ ನಟಿ ಶ್ರುತಿ ಕೂಡ ಪ್ರತಿಕ್ರಿಯೆ ನೀಡಿದ್ದು, ನಟನೆ ಮಾಡಲಿರೋ ಸುದ್ದಿಯನ್ನು ನಿಜ ಎಂದು ನಂಬಲಾಗಿದೆ.
ಇದನ್ನೂ ಓದಿ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಭೇಟಿಯಾದ ಚಿರಂಜೀವಿ
2024ರ ಬಹುನಿರೀಕ್ಷಿತ ಚಿತ್ರವಾಗಿರೋ 'ದೇವರ'ವನ್ನು ಏಪ್ರಿಲ್ 5 ರಂದು ಬಿಡುಗಡೆ ಮಾಡಲಾಗುವುದು ಎಂದು ನಿರ್ಮಾಪಕರು ಈಗಾಗಲೇ ಘೋಷಿಸಿದ್ದಾರೆ. ಆದರೆ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವ ಸಾಧ್ಯತೆ ಕೂಡ ಇದೆಯಂತೆ. ಚಿತ್ರದಲ್ಲಿ ಖಳನಾಯಕನ ಪಾತ್ರ ನಿರ್ವಹಿಸುತ್ತಿರೋ ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಇತ್ತೀಚೆಗೆ ಗಾಯಗೊಂಡಿದ್ದರು. ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಚಿತ್ರೀಕರಣ ಆರಂಭಿಸಲು ಕೊಂಚ ಸಮಯ ಹಿಡಿಯಲಿದೆ. ಮತ್ತೊಂದೆಡೆ ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ ಮತ್ತು ವಿಎಫ್‌ಎಕ್ಸ್ ಕೆಲಸಗಳು ಬಾಕಿ ಉಳಿದಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ: 28 ವರ್ಷಗಳ ಬಳಿಕ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ: ಸಂಪೂರ್ಣ ಮಾಹಿತಿ ನಿಮಗಾಗಿ
ಚಿತ್ರದಲ್ಲಿ ಜೂ. ಎನ್‌ಟಿಆರ್, ಜಾಹ್ನವಿ ಕಪೂರ್, ಸೈಫ್ ಅಲಿ ಖಾನ್ ಜೊತೆ ಹಿರಿಯ ನಾಯಕನಟ ಶ್ರೀಕಾಂತ್, ಮುರಳಿ ಶರ್ಮಾ, ಪ್ರಕಾಶ್ ರಾಜ್, ಶೈನ್ ಟಾಮ್ ಚಾಕೊ, ಚೈತ್ರಾ ರಾಯ್ ಸೇರಿದಂತೆ ಮೊದಲಾದವರು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಖ್ಯಾತ ಗಾಯಕ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡುತ್ತಿದ್ದಾರೆ. ಯುವಸುಧಾ ಮತ್ತು ಎನ್‌ಟಿಆರ್ ಬ್ಯಾನರ್ ಅಡಿಯಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ.