ETV Bharat / entertainment

'ನಗುವಿನ ಹೂಗಳ ಮೇಲೆ' ಸಿನಿಮಾದ ಮತ್ತೊಂದು ಹಾಡು ರಿಲೀಸ್​ - ನಗುವಿನ ಹೂಗಳ ಮೇಲೆ ಚಿತ್ರ

ನಗುವಿನ ಹೂಗಳ ಮೇಲೆ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೊಂಡಿದೆ.

ನಗುವಿನ ಹೂಗಳ ಮೇಲೆ ಸಿನಿಮಾದ ಮತ್ತೊಂದು ಹಾಡು ರಿಲೀಸ್​

author img

By ETV Bharat Karnataka Team

Published : Feb 8, 2024, 8:17 PM IST

ಕಿರುತೆರೆಯಲ್ಲಿ ಮೋಡಿ ಮಾಡಿರುವ ಅಭಿದಾಸ್ ಹಾಗು ಶರಣ್ಯಾ ಶೆಟ್ಟಿ ಜೋಡಿ ಇದೀಗ ನಗುವಿನ ಹೂಗಳ ಮೇಲೆ ಚಿತ್ರದ ಮೂಲಕ ಬೆಳ್ಳಿಪರದೆ ಮೇಲೆ ಮಿಂಚಲು ಸಿದ್ದರಾಗಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶನದ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಇದರ ನಡುವೆಯೇ ಚಿತ್ರತಂಡ ಪ್ರೇಕ್ಷಕರನ್ನು ಸೆಳೆಯಲು ಚಿತ್ರದ ಹಾಡೊಂದನ್ನು ಬಿಡುಗಡೆಗೊಳಿಸಿದೆ.

ಈಗಾಗಲೇ ನಗುವಿನ ಹೂಗಳ ಮೇಲೆ ಗಾಢ ನಿರೀಕ್ಷೆಗಳ ಇಬ್ಬನಿ ಮೂಡಿಕೊಂಡಿದೆ. ಅದನ್ನು ಮತ್ತಷ್ಟು ತೀವ್ರವಾಗಿಸುವ ನಿಟ್ಟಿನಲ್ಲಿ ಈ ಹಾಡು ಪರಿಣಾಮಕಾರಿಯಾಗಿ ಮೂಡಿಕೊಂಡಿದೆ. ಸದರಿ ಸನಿಮಾದಲ್ಲಿ ಪ್ರೇಮದ ನಾನಾ ಮಜಲುಗಳಿವೆ. ಅದರಲ್ಲೊಂದು ಭಾವದ ಅಭಿವ್ಯಕ್ತಿಯೆಂಬಂತೆ ಸದರಿ ಹಾಡನ್ನು ರೂಪಿಸಿದಂತಿದೆ.

  • " class="align-text-top noRightClick twitterSection" data="">

ಮುದ್ದು ಬೇಬಿ ಲವ್ ಯು ಬೇಬಿ ಅಂತ ಶುರುವಾಗುವ ಈ ಗೀತೆ ಲವ್ ಫ್ರಾನ್ ಮೆಹತಾ ಸಂಗೀತ ಸ್ಪರ್ಶದೊಂದಿಗೆ ಮೂಡಿಬಂದಿದೆ. ಕಿರಣ್ ನಾಗರಾಜ್ ಸಾಹಿತ್ಯ ಮತ್ತು ರೋನಿ, ಮೇಘನಾ ಕಂಠಸಿರಿಯಲ್ಲಿ ರೂಪುಗೊಂಡಿರುವ ಹಾಡು ಫಲಿಸಿದ ಪ್ರೇಮದ ಎಲ್ಲ ಭಾವಗಳನ್ನೂ ಸಶಕ್ತವಾಗಿ ಹಿಡಿದಿಟ್ಟಂತೆ ಭಾಸವಾಗುತ್ತದೆ. ಜೀ ಮ್ಯೂಸಿಕ್ ಮೂಲಕ ಬಿಡುಗಡೆಗೊಂಡಿರುವ ಮುದ್ದು ಬೇಬಿ ಹಾಡು ಬಹು ಬೇಗನೆ ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ಇನ್ನೇನು ಪ್ರೇಮಿಗಳ ದಿನ ಹತ್ತಿರದಲ್ಲಿದೆ. ಆ ಹೊತ್ತಿಗೆಲ್ಲ ಈ ಹಾಡು ಸಮಸ್ತ ಪ್ರೇಮಿಗಳ ಫೇವರಿಟ್ ಆಗಿ ಬದಲಾಗುವ ಲಕ್ಷಣಗಳಿವೆ.

ನಿರ್ದೇಶಕ ವೆಂಕಟ್ ಭಾರದ್ವಾಜ್ ಸಣ್ಣ ಸಣ್ಣ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಈ ಸಿನಿಮಾ ರೂಪಿಸಿದ್ದಾರೆ. ಅದರಲ್ಲಿಯೂ ಕಥೆಗೆ ತಕ್ಕ ಹಾಡುಗಳನ್ನು ರೂಪಿಸಲು ಒಂದು ಅನ್ವೇಷಣೆಯನ್ನೇ ನಡೆಸಿದ್ದರಂತೆ. ಅದರ ಭಾಗವಾಗಿ ಪಂಜಾಬ್ ಮೂಲದ ಪ್ರಸಿದ್ಧ ಸಂಗೀತ ನಿರ್ದೇಶಕ ಲವ್ ಫ್ರಾನ್ ಮೆಹತಾ ಮಾತ್ರವಲ್ಲದೇ, ಬೇರೆ ಬೇರೆ ರಾಜ್ಯಗಳ ಗಾಯಕರನ್ನೂ ಒಂದೆಡೆ ಕಲೆಹಾಕಿದ್ದಾರೆ.

ಇಂಥಾದ್ದೊಂದು ಪರಿಶ್ರಮ, ಕನಸಿನ ಪ್ರತಿಫಲವಾಗಿಯೇ ನಗುವಿನ ಹೂಗಳ ಮೇಲೆ ಚಿತ್ರದ ಒಂದೊಂದು ಹಾಡುಗಳೂ ಒಂದೊಂದು ಬೆರಗು ಹೊತ್ತು ಬಂದಿವೆ. ಇದೀಗ ಬಿಡುಗಡೆಗೊಂಡಿರುವ ಹಾಡಿನಲ್ಲಿಯೂ ಅಂಥ ಛಾಯೆಯಿದೆ. ಚಿತ್ರದಲ್ಲಿ ಅಭಿದಾಸ್ ಹಾಗೂ ಶರಣ್ಯಾ ಶೆಟ್ಟಿ ಅಲ್ಲದೇ ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣವಿದೆ.

ನಗುವಿನ ಹೂಗಳ ಮೇಲೆ ಸಿನಿಮಾ
ನಗುವಿನ ಹೂಗಳ ಮೇಲೆ ಸಿನಿಮಾ

ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್‌ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ.ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನವಿದೆ. ನಾಳೆ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ.

ಇದನ್ನೂ ಓದಿ: ದರ್ಶನ್​​ ಸಿನಿಮಾ ನಿರ್ದೇಶಿಸಲಿದ್ದಾರೆ ಪ್ರೇಮ್​; ಸಂಜಯ್​ ದತ್​​ ವಿಲನ್​?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.