ETV Bharat / entertainment

ಮೆಗಾಸ್ಟಾರ್ ಚಿರಂಜೀವಿಯ 'ವಿಶ್ವಂಭರ'ದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ - Ashika Ranganath In Vishwambhara - ASHIKA RANGANATH IN VISHWAMBHARA

ಸೌತ್​ ಸೂಪರ್ ಸ್ಟಾರ್ ಚಿರಂಜೀವಿ ಮುಖ್ಯಭೂಮಿಕೆಯ 'ವಿಶ್ವಂಭರ' ಚಿತ್ರದಲ್ಲಿ ಕನ್ನಡದ ಆಶಿಕಾ ರಂಗನಾಥ್ ಅಭಿನಯಿಸಲಿದ್ದಾರೆ.

Ashika Ranganath
ಆಶಿಕಾ ರಂಗನಾಥ್ (ETV Bharat)
author img

By ETV Bharat Karnataka Team

Published : May 26, 2024, 8:58 AM IST

'ಚುಟು ಚುಟು' ಚೆಲುವೆ ಆಶಿಕಾ ರಂಗನಾಥ್ ಕನ್ನಡದ ಜೊತೆಗೆ ತೆಲುಗು ಸಿನಿಮಾಗಳಲ್ಲೂ ಬ್ಯುಸಿ. ಜೂನಿಯರ್ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್ ಅಭಿನಯದ ಅಮಿಗೋಸ್‌ ಸಿನಿಮಾ ಮೂಲಕ ತೆಲುಗಿಗೆ ಎಂಟ್ರಿ ಕೊಟ್ಟಿದ್ದ ಇವರು, ಆ ಬಳಿಕ ನಾ ಸಾಮಿ ರಂಗ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ್ ಜೋಡಿಯಾಗಿ ನಟಿಸಿದ್ದರು. ಇದೀಗ ಮೆಗಾ ಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸುವ ಅವಕಾಶ ಪಡೆದಿದ್ದಾರೆ.

ಹೌದು, ಚಿರಂಜೀವಿ ಅಭಿನಯಿಸುತ್ತಿರುವ ವಿಶ್ವಂಭರ ಚಿತ್ರದಲ್ಲಿ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಅವರ ಪಾತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿದೆ. ಚಿರಂಜೀವಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್​ ನಟಿಸುವರು. ಯುವಿ ಕ್ರಿಯೇಷನ್ ಬ್ಯಾನರ್ ಅಡಿ ವಿಕ್ರಮ್, ವಂಶಿ ಹಾಗೂ ಪ್ರಮೋದ್ ಸೇರಿ ಚಿತ್ರ ನಿರ್ಮಿಸುತ್ತಿದ್ದಾರೆ. ಬಿಂಬಿಸಾರ ಚಿತ್ರ ನಿರ್ದೇಶಿಸಿದ್ದ ವಸಿಷ್ಠ ವಿಶ್ವಂಭರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಆಸ್ಕರ್ ವಿಜೇತ ಎಂ.ಎಂ.ಕೀರವಾಣಿ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಚೋಟಾ ಕೆ.ನಾಯ್ಡು ಛಾಯಾಗ್ರಹಣ ನಿರ್ವಹಿಸುತ್ತಿದ್ದರೆ, ರಾಮ ಲಕ್ಷ್ಮಣ ಸಾಹಸ ನಿರ್ದೇಶನ ವಿಶ್ವಂಭರಕ್ಕಿದೆ. 2025ರ ಸಂಕ್ರಾಂತಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಬೆಂಗಳೂರು ರೇವ್​ ಪಾರ್ಟಿ ಕೇಸ್: ತೆಲುಗು ನಟಿಯ ಬೆಂಬಲಕ್ಕೆ ನಿಂತ ಟಾಲಿವುಡ್​ ಸೂಪರ್ ಸ್ಟಾರ್ - Vishnu Manchu On Rave Party

ETV Bharat Logo

Copyright © 2024 Ushodaya Enterprises Pvt. Ltd., All Rights Reserved.