ಬೆಂಗಳೂರು: 'ನಾನು ನಂದಿನಿ, ಬೆಂಗಳೂರಿಗೆ ಬಂದೀನಿ' ಎಂಬ ಹಾಡಿನ ಹಾಸ್ಯಮಯ ವಿಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ ಎಂಬಾತನಿಗೆ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ವಿಕಾಸ್‌ನನ್ನು ಬೈಯಪ್ಪನಹಳ್ಳಿ ಪೊಲೀಸರು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಡ್ರಗ್ಸ್ ಬಗೆಗಿನ ಪ್ರಚೋದನಾತ್ಮಕ ಹೇಳಿಕೆಯ ವಿಡಿಯೋ ಡಿಲೀಟ್ ಮಾಡಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಡಿಯೋವನ್ನು ಡಿಲೀಟ್ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾದಕವಸ್ತು ವ್ಯಸನದ ಬಗ್ಗೆ ಇತ್ತೀಚೆಗೆ ವಿಕಾಸ್ ಹಾಗೂ ಅವರ ತಂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡಿದ್ದರು.
ಇದನ್ನೂ ಓದಿ: ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣಾ ನಿಧನ - Actress Aparna Dies