ETV Bharat / entertainment

'ಸಾವಿರ ಗುಂಗಲಿ' ಒಲವಿನ ಸವಾರಿ ಹೊರಟ ಬೃಂದಾ ಆಚಾರ್ಯ-ಭರತ್ ಬೋಪಣ್ಣ - Saavira Gungali Song - SAAVIRA GUNGALI SONG

ಸಾವಿರ ಗುಂಗಲಿ ಎಂಬ ಆಲ್ಬಂ ಸಾಂಗ್ ಅನಾವರಣಗೊಂಡು ಕೇಳುಗರ ಮನ ಸೆಳೆಯುತ್ತಿದೆ.

Saavira Gungali Song
'ಸಾವಿರ ಗುಂಗಲಿ' ಹಾಡು ಅನಾವರಣ (ETV Bharat)
author img

By ETV Bharat Karnataka Team

Published : May 12, 2024, 8:19 PM IST

ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೇ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗದು ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಕೊಡುತ್ತಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ 'ಸಾವಿರ ಗುಂಗಲಿ' ಆಲ್ಬಂ ಸಾಂಗ್ ಈಗ ಟ್ರೆಂಡಿಂಗ್​ ಆಗಿದೆ.

ಇತ್ತೀಚಿನ ದಿನಮಾನಗಳಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ. ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರುಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ. ಇಂಥ ಹೊತ್ತಲ್ಲಿ ಸಾವಿರ ಗುಂಗಲಿ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನು ಸೋಕುತ್ತಿದೆ. ಮತ್ತಷ್ಟು ಮನಸುಗಳನ್ನು ಆವರಿಸಿಕೊಳ್ಳುತ್ತಾ ಮುಂದುವರೆಯುತ್ತಿದೆ. ಅಂದಹಾಗೆ, ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಈ ಹಾಡು ಮೂಡಿ ಬಂದಿದೆ. ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ ಪಿ ರಾವ್ ಸೇರಿದಂತೆ ಮುಂತಾದವರು ಈ ಹಾಡಿನ ಭಾಗವಾಗಿದ್ದಾರೆ.

  • " class="align-text-top noRightClick twitterSection" data="">

ಹಾಡಿನ ಪ್ರಧಾನ ಆಕರ್ಷಣೆಯಾಗಿ ಬೃಂದಾ ಆಚಾರ್ಯ ಕಾಣಿಸುತ್ತಾರೆ. ಹಾಡಿನ ನೆರಳಲ್ಲಿ ಕಥೆಯೊಂದು ಸರಿಯುವಂತೆ ಭಾಸವಾಗುವ ಈ ಆಲ್ಬಂ ಸಾಂಗ್, ಕೇಳುಗರನ್ನೆಲ್ಲ ಒಂದೇ ಸಲಕ್ಕೆ ಸೆಳೆಯುವಂತಿದೆ. ವಿಶೇಷವೆಂದರೆ, ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುತ್ತಿರುವ ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಪೃಥ್ವಿ ಭಟ್ ಧ್ವನಿಯಲ್ಲಿ ಗಾಯನ ಮೂಡಿಬಂದಿದೆ. ಛಾಯಾಗ್ರಹಣ ಸೇರಿದಂತೆ ಎಲ್ಲದರಲ್ಲಿಯೂ ಈ ಹಾಡು ಅದ್ಧೂರಿಯಾಗಿ, ಅರ್ಥವತ್ತಾಗಿ ಮೂಡಿ ಬಂದಿದೆ. ಹೆಚ್ಚಿನ ವೀಕ್ಷಣೆ ಪಡೆಯುತ್ತ ಮುಂದುವರೆಯುತ್ತಿರುವ ಸದರಿ ಆಲ್ಬಂ ಸಾಂಗ್​ನ ಸವಾರಿಯೀಗ ಟ್ರೆಂಡಿಂಗ್​​ನತ್ತ ಮುಖ ಮಾಡಿದೆ. ಆ ಮೂಲಕ ಇದರ ಹಿಂದಿರುವ ಕನಸು, ಶ್ರಮ, ಶ್ರದ್ಧೆಗಳೆಲ್ಲವೂ ಸಾರ್ಥಕವಾದಂತಾಗಿದೆ.

ಇದನ್ನೂ ಓದಿ: 'ಮಿಸ್ಟರ್ ಅಂಡ್ ಮಿಸಸ್ ಮಾಹಿ' ಟ್ರೇಲರ್​ ರಿಲೀಸ್: ಈ ತಿಂಗಳಾಂತ್ಯ ಜಾಹ್ನವಿ, ರಾಜ್‌ಕುಮಾರ್ ಸಿನಿಮಾ ತೆರೆಗೆ - Mr And Mrs Mahi

ಬೃಂದಾ ಆಚಾರ್ಯ ಪ್ರಸ್ತುತ ಹಲವು ಬಿಗ್ ಬಜೆಟ್ ಸಿನಿಮಾಗಳಲ್ಲಿ ನಾಯಕಿಯಾಗಿ ಬ್ಯುಸಿಯಾಗಿದ್ದಾರೆ. ಅದರ ನಡುವೆಯೂ ಇಂಥಾದ್ದೊಂದು ನವಿರು ಹಾಡಿಗೆ ಜೀವ ತುಂಬುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೀರಿಯಲ್ ಜಗತ್ತಿನಿಂದ ಬಂದು, ಇದೀಗ ನಾಯಕನಾಗಿ ನೆಲೆಗಾಣುತ್ತಿರುವ ಭರತ್ ಬೋಪಣ್ಣ ಕೂಡಾ ಅಷ್ಟೇ ಚೆಂದವಾಗಿ ನಟಿಸಿದ್ದಾರೆ.

ಇದನ್ನೂ ಓದಿ: ಮನರಂಜನೆಯ ರಸದೌತಣ ಉಣಬಡಿಸಲು ಬರುತ್ತಿದ್ದಾರೆ 'ಮೂರನೇ ಕೃಷ್ಣಪ್ಪ': ಟ್ರೇಲರ್ ನೋಡಿ - Moorane Krishnappa

ಜೋಯ್ ಕಾಸ್ಟಾ ಸಂಗೀತ ನಿರ್ದೇಶನ, ಎನ್.ಕೆ ರಾಜ್ ಛಾಯಾಗ್ರಹಣ, ತಮಿಳರಸನ್ ಎಂ. ಸಂಕಲನ, ಅನಿಲ್ ಸಹ ನಿರ್ದೇಶನದೊಂದಿಗೆ ಈ ವೀಡಿಯೋ ಸಾಂಗ್ ಕಳೆಗಟ್ಟಿಕೊಂಡಿದೆ. ದಿನದಿಂದ ದಿನಕ್ಕೆ ಈ ಹಾಡು ಹೆಚ್ಚೆಚ್ಚು ಜನರನ್ನು ತಲುಪುತ್ತಿದೆ. ಪ್ರಚಾರದ ಭರಾಟೆ ಇಲ್ಲದೆಯೂ ಕೇಳುಗರನ್ನು ವಶವಾಗಿಸಿಕೊಳ್ಳುತ್ತಿದೆ. ಸಂಗೀತದ ಧ್ಯಾನದೊಂದಿಗೆ ಇಂತದ್ದೊಂದು ಸಾಹಸ ಮಾಡಿರುವ ಒಂದಿಡಿ ತಂಡದ ಕಣ್ಣಲ್ಲೀಗ ಖುಷಿಯ ಹೊಳಪು ಮಿರುಗಲಾರಂಭಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.