ETV Bharat / entertainment

ಯೂಟ್ಯೂಬ್​ನಲ್ಲಿ ಟ್ರೆಂಡಿಂಗ್​​​ನಲ್ಲಿದೆ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಚಿನ್ನಮ್ಮ ಹಾಡು‌ - Krishnam Pranaya Sakhi - KRISHNAM PRANAYA SAKHI

'ಕೃಷ್ಣಂ ಪ್ರಣಯ ಸಖಿ' ಚಿತ್ರದ ಚಿನ್ನಮ್ಮ ಹಾಡು‌ ಯೂಟ್ಯೂಬ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ.

Chinnamma song from Krishnam Pranaya Sakhi
ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು‌ (ETV Bharat)
author img

By ETV Bharat Karnataka Team

Published : Jun 29, 2024, 2:04 PM IST

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂದಿನ ಬಹು ನಿರೀಕ್ಷಿತ ಚಿತ್ರ 'ಕೃಷ್ಣಂ ಪ್ರಣಯ ಸಖಿ'. 'ಬಾನ ದಾರಿಯಲ್ಲಿ' ಸಿನಿಮಾ ನಂತರ ಗಣೇಶ್ ಒಂಬತ್ತು ಚೆಂದುಳ್ಳಿ ಚೆಲುವೆಯರ ಜೊತೆ ತೆರೆ ಹಂಚಿಕೊಂಡಿರುವ ರೊಮ್ಯಾಂಟಿಕ್​​ ಚಿತ್ರ. ಈಗಾಗಲೇ ಅನಾವರಣಗೊಂಡಿರುವ ಚಿತ್ರದ ಹಾಡುಗಳು ಈಗಾಗಲೇ ಸಿನಿ ಪ್ರೇಮಿಗಳ‌ ಮನಸ್ಸು ಕದಿಯುತ್ತಿದೆ‌.

Chinnamma song from Krishnam Pranaya Sakhi
ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು‌ (ETV Bharat)

ಶ್ರೀನಿವಾಸರಾಜು ಈ ಬಾರಿ ರೊಮ್ಯಾಂಟಿಕ್ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದು, ಸಿನಿಮಾದ ಚಿನ್ನಮ್ಮ ಎಂಬ ಹಾಡು‌ ಇತ್ತೀಚೆಗೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಅನಾವರಣಗೊಂಡಿತು. ಇದೀಗ ಆಲ್ ಇಂಡಿಯಾ ಯೂಟ್ಯೂಬ್ ಟ್ರೆಂಡಿಂಗ್ ಪಟ್ಟಿಯಲ್ಲಿ ಚಿನ್ನಮ್ಮ ಹಾಡು ಮೂರನೇ ಸ್ಥಾನದಲ್ಲಿದೆ. ಬಿಡುಗಡೆಯಾದ 5 ದಿನಗಳಲ್ಲಿ 8 ಮಿಲಿಯನ್​​ಗೂ ಅಧಿಕ ವೀಕ್ಷಣೆಗೊಂಡಿದೆ. ಮೊದಲ ಸ್ಥಾನದಲ್ಲಿ ದಳಪತಿ ವಿಜಯ್ ಅವರ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಚಿತ್ರದ ಚಿನ್ನ ಚಿನ್ನ ಕಣ್ಗಳ್ ಹಾಗೂ ಎರಡನೇ ಸ್ಥಾನದಲ್ಲಿ ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಚಿತ್ರದ ಥೀಮ್ ಆಫ್ ಕಲ್ಕಿ ಹಾಡುಗಳಿವೆ. ಇದೇ ವೇಗದಲ್ಲಿ ವೀಕ್ಷಣೆಯಾಗುತ್ತಿದ್ದರೆ, ಚಿನ್ನಮ್ಮ ಹಾಡು ಮೊದಲ ಸ್ಥಾನಕ್ಕೆ ಬರುವ ಸಾಧ್ಯತೆ ಇದೆ.

ಕೃಷ್ಣಂ ಪ್ರಣಯ ಸಖಿಯ ಗಣಿ (ETV Bharat)

ಗಣೇಶ್ ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್ ಬರೆದಿರುವ ಪದಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಈ ಹಾಡು ಹಾಡಿದ್ದಾರೆ.

'ಕೃಷ್ಣಂ ಪ್ರಣಯ ಸಖಿ', ಗೋಲ್ಡನ್ ಸ್ಟಾರ್ ಗಣಿ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಇದನ್ನೂ ಓದಿ: ಎರಡನೇ ದಿನದ ಗಳಿಕೆಯಲ್ಲಿ ಕುಸಿದ 'ಕಲ್ಕಿ'; ಪ್ರಭಾಸ್​, ಅಮಿತಾಭ್​​ ಸಿನಿಮಾ ಗಳಿಸಿದ್ದಿಷ್ಟು! - Kalki Collection Day 2

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಸಾಹಿತಿ ಕವಿರಾಜ್ ಹಾಡುಗಳನ್ನ ಬರೆದಿದ್ದಾರೆ. ಸದ್ಯ ಟೈಟಲ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರೋ ಕೃಷ್ಣಂ ಪ್ರಣಯ ಸಖಿ ಚಿತ್ರ ಆಗಸ್ಟ್‌ 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಚಿತ್ರ ಗಣಿಗೆ ಮತ್ತಷ್ಟು ಸ್ಟಾರ್ ವ್ಯಾಲ್ಯೂ ಹೆಚ್ಚಿಸುವ ವಿಶ್ವಾಸವಿದೆ. ಸಿನಿಮಾ ವೀಕ್ಷಿಸಲು ಸಿನಿಪ್ರಿಯರು ಕಾತರರಾಗಿದ್ದಾರೆ.

ಇದನ್ನೂ ಓದಿ: ಹೀನಾ ಖಾನ್​ಗೆ ಸ್ತನ ಕ್ಯಾನ್ಸರ್: ಬ್ರೆಸ್ಟ್​​ ಕ್ಯಾನ್ಸರ್​ ವಿರುದ್ಧ ಹೋರಾಡಿದ ನಟಿಮಣಿಯರಿವರು - Breast Cancer

ETV Bharat Logo

Copyright © 2024 Ushodaya Enterprises Pvt. Ltd., All Rights Reserved.