ETV Bharat / entertainment

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್: ದೆಹಲಿ ಪೊಲೀಸರು - Rashmika Mandanna deepfake video

ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋದ ಸೃಷ್ಟಿಕರ್ತ (ಶಂಕಿತ) ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

Rashmika Mandanna
ರಶ್ಮಿಕಾ ಮಂದಣ್ಣ
author img

By ETV Bharat Karnataka Team

Published : Jan 20, 2024, 3:48 PM IST

Updated : Jan 20, 2024, 4:09 PM IST

2023ರ ಕೊನೆಯಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ನಕಲಿ ವಿಡಿಯೋ ವೈರಲ್​​ ಆಗಿ ಸಂಚಲನ ಸೃಷ್ಟಿಸಿತ್ತು. ವಿವಿಧ ಕ್ಷೇತ್ರಗಳ ಗಣ್ಯರು ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರು. ಸರ್ಕಾರ ಕೂಡ ಸ್ಪಂದಿಸಿ, ಪೊಲೀಸರು ತನಿಖೆ ಆರಂಭಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಅರೆಸ್ಟ್ ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ 'ಕಿರಿಕ್​ ಪಾರ್ಟಿ' ಸಿನಿಮಾ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಫೇಕ್​​ ವಿಡಿಯೋದ ಸೃಷ್ಟಿಕರ್ತ ಎಂದು ಶಂಕಿಸಲಾಗಿರುವ ಆರೋಪಿಯನ್ನು ಬಂಧಿಸಲಾಗಿದೆ. ದಕ್ಷಿಣ ಭಾರತದ ಪ್ರದೇಶವೊಂದರಲ್ಲಿ ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗಿದೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2023ರ ನವೆಂಬರ್ 10 ರಂದು ದೆಹಲಿ ಪೊಲೀಸ್​ನ ಸ್ಪೆಷಲ್​ ಸೆಲ್​ನ ಇಂಟೆಲಿಜೆನ್ಸ್ ಫ್ಯೂಷನ್ ಆ್ಯಂಡ್ ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕದಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ಫೋರ್ಜರಿಗೆ ಶಿಕ್ಷೆ) ಮತ್ತು 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ನಕಲಿ ನಿರ್ಮಾಣ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಸಿ ಮತ್ತು 66ಇ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಎಫ್‌ಐಆರ್ ದಾಖಲಿಸಿದ ಕೂಡಲೇ ಐಎಫ್‌ಎಸ್‌ಒ ಯುನಿಟ್, ಫೇಕ್​ ವಿಡಿಯೋದ ಯುಆರ್‌ಎಲ್ ಸೇರಿದಂತೆ ಇತರ ವಿವರಗಳನ್ನು ಕೊಡುವಂತೆ 'ಮೆಟಾ' ಸಂಸ್ಥೆಗೆ ಪತ್ರ ಬರೆದಿತ್ತು. ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯನ್ನು ಕಂಡುಹಿಡಿಯೋ ಸಲುವಾಗಿ ಈ ಮಾಹಿತಿಗಳನ್ನು ಕೇಳಿತ್ತು.

ಇದನ್ನೂ ಓದಿ: 'ಇದು ನನ್ನ ಪೂರ್ವ ಜನ್ಮದ ಪುಣ್ಯ, ಶ್ರೀರಾಮನಿಗೆ ಜಯವಾಗಲಿ': ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ ಸಂತಸ

ಫೇಕ್​ ವಿಡಿಯೋ ಬಗ್ಗೆ ಸ್ವತಃ ನಟಿ ರಶ್ಮಿಕಾ ಮಂದಣ್ಣ ತಮ್ಮ ಅಸಮಾಧಾನ ಹೊರಹಾಕಿದ್ದರು. ಈ ನಕಲಿ ವಿಡಿಯೋ ಕಂಡು ನೋವಾಗಿದೆ ಜೊತೆಗೆ ಭಯವೂ ಆಗಿದೆ. ತಂತ್ರಜ್ಞಾನದ ದುರುಪಯೋಗದ ಪರಿಣಾಮ ನನ್ನಂತೆಯೇ ಅನೇಕರಿಗೆ ನೋವಾಗಿರಬಹುದು. ವಿದ್ಯಾಭ್ಯಾಸದ ಸಂದರ್ಭ ಹೀಗಾಗಿದ್ದರೆ ಹೇಗೆ ನಿಭಾಯಿಸುತ್ತಿದ್ದೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಕೃತಘ್ಞಳಾಗಿದ್ದೇನೆ. ತುರ್ತು ಪರಿಹಾರ ಕಂಡುಕೊಳ್ಳಬೇಕಿದೆ ಎಂಬರ್ಥದ ಪೋಸ್ಟ್ ಶೇರ್ ಮಾಡಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತು. ದೆಹಲಿಯಲ್ಲಿ ಪ್ರಕರಣ ದಾಖಲಾಗಿ ವಿಚಾರಣೆ ಮುಂದುವರಿದಿದೆ.

ಇದನ್ನೂ ಓದಿ: ರಶ್ಮಿಕಾ - ವಿಜಯ್​ ನಿಶ್ಚಿತಾರ್ಥ ಕುರಿತು ಮೌನ ಮುರಿದ ನಟ; ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಸಿನಿಮಾ ವಿಚಾರ ಗಮನಿಸೋದಾದರೆ, ಇತ್ತೀಚೆಗೆ ತೆರೆಕಂಡ 'ಅನಿಮಲ್​​' ಸೂಪರ್ ಡೂಪರ್​ ಹಿಟ್ ಆಗಿದೆ. ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್ ರಣ್​ಬೀರ್​ ಕಪೂರ್ ಜೊತೆ ತೆರೆ ಹಂಚಿಕೊಂಡಿದ್ದರು. ತೃಪ್ತಿ ಡಿಮ್ರಿ, ಅನಿಲ್​ ಕಪೂರ್, ಸನ್ನಿ ಡಿಯೋಲ್​ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಸೌತ್​ ಸೂಪರ್ ಸ್ಟಾರ್ ಅರ್ಜುನ್​ ಕಪೂರ್​ ಜೊತೆಗಿನ 'ಪುಷ್ಪ 2' ನಟಿಯ ಮುಂದಿನ ಬಹುನಿರೀಕ್ಷಿತ ಸಿನಿಮಾ. 'ದಿ ಗರ್ಲ್​ಫ್ರೆಂಡ್'​, 'ರೈನ್​ಬೋ' ಪ್ರಾಜೆಕ್ಟ್​​ ಕೂಡ ಹೊಂದಿದ್ದಾರೆ.

Last Updated : Jan 20, 2024, 4:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.