ETV Bharat / entertainment

'ಸೈಮಾ ಆವಾರ್ಡ್ಸ್ ಒಂದು ಸೆಲೆಬ್ರೆಷನ್': ಡಾಲಿ ಧನಂಜಯ್​ - SIIMA 2024 - SIIMA 2024

'ಸೈಮಾ' ಸಮಾರಂಭ ದುಬೈನಲ್ಲಿ ಮುಂದಿನ ತಿಂಗಳು ಸೆಪ್ಟೆಂಬರ್​​ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಶುಕ್ರವಾರ ಸಂಜೆ ಮಾಧ್ಯಮಗೋಷ್ಟಿ ಆಯೋಜಿಸಲಾಗಿತ್ತು.

SIIMA Awards 2024
ಸೈಮಾ ಕುರಿತ ಸುದ್ದಿಗೋಷ್ಠಿಯಲ್ಲಿ ಡಾಲಿ (ETV Bharat)
author img

By ETV Bharat Karnataka Team

Published : Aug 24, 2024, 7:46 PM IST

2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭ 'ಸೈಮಾ' ದುಬೈನಲ್ಲಿ ಮುಂದಿನ ತಿಂಗಳು ಸೆಪ್ಟೆಂಬರ್​​ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಶುಕ್ರವಾರ ಸಂಜೆ ಮಾಧ್ಯಮಗೋಷ್ಟಿ ಆಯೋಜಿಸಲಾಗಿತ್ತು. ಸೈಮಾ ಅಧ್ಯಕ್ಷರಾದ ಬೃಂದಾ ಪ್ರಸಾದ್, ನಟರಾದ ಡಾಲಿ ಧನಂಜಯ್, ರಿಷಿ, ನಟಿಯರಾದ ನೇಹಾ ಶೆಟ್ಟಿ, ನಿಧಿ ಅಗರ್ವಾಲ್, ಅವಿಕಾ ಗೋರ್, ಶಾನ್ವಿ ಶ್ರೀವಾಸ್ತವ್, ಶುಭ್ರ ಅಯ್ಯಪ್ಪ, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಸೀನಿಯರ್ ಎಕ್ಸಿಕ್ಯೂಟಿವ್ ಆಫೀಸರ್ ನೊಬುಟಾಕಾ ಸುಜುಕಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ರಾಯ್ ಸಿಜೆ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಬೃಂದಾ ಪ್ರಸಾದ್ ಮಾತನಾಡಿ, ಈ ಬಾರಿ ನಡೆಯುತ್ತಿರುವುದು 12ನೇ ಆವೃತ್ತಿಯ ಸೈಮಾ. 12 ಕೇವಲ ಸಂಖ್ಯೆಯಲ್ಲ. ಅದೊಂದು ಸುಂದರ ಪಯಣ. ದಕ್ಷಿಣ ಭಾರತದಲ್ಲಿ ಪ್ರತೀ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ ಹೆಗ್ಗಳಿಕೆಗೆ ಸೈಮಾ ಭಾಜನವಾಗಿದೆ. ದಕ್ಷಿಣ ಸಿನಿರಂಗದ ಪ್ರತಿಭೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮಿಸುವ ಸೈಮಾದಲ್ಲಿ ನಾಲ್ಕು ಭಾಷೆಯ ಚಿತ್ರರಂಗ ಒಂದೇ ಕುಟುಂಬದಂತೆ ಭಾಗಿಯಾಗುತ್ತಾರೆ ಎಂದು ತಿಳಿಸಿದರು.

SIIMA Awards 2024
ಸೈಮಾ ಕುರಿತ ಸುದ್ದಿಗೋಷ್ಠಿ (ETV Bharat)

ನಟ ಡಾಲಿ ಧನಂಜಯ್ ಮಾತನಾಡಿ, ಸೈಮಾ ಎಂದರೆ ನಮಗೆ ಖುಷಿ. ಈ ಬಾರಿ ದುಬೈನಲ್ಲಿ ಮತ್ತೆ ಸೈಮಾ ಪ್ರೋಗ್ರಾಮ್​​ ನಡೆಯಲಿದೆ. ನನಗೆ ಅದ್ಭುತ ಮೆಮೋರಿ ಕ್ರಿಯೇಟ್ ಮಾಡುವ ವೇದಿಕೆ. ಕಳೆದ ವರ್ಷ ನನ್ನ ಹುಟ್ಟುಹಬ್ಬಕ್ಕೆ ನಮ್ಮ ಚಿತ್ರರಂಗದವರಿಗೆ ಪಾರ್ಟಿ ಕೊಟ್ಟಿದೆ. ಈ ಬಾರಿ ನನಗೆ ಸೈಮಾದಿಂದ ಪಾರ್ಟಿ ಕೊಡುತ್ತಿದ್ದಾರೆ. ಎಲ್ಲಾ ಇಂಡಸ್ಟ್ರಿಯ ಕಲಾವಿದರು, ನಿರ್ದೇಶಕರನ್ನು ನೋಡುವ ಒಂದೊಳ್ಳೆ ವೇದಿಕೆ. ಈ ರೀತಿಯ ಈವೆಂಟ್ ಚೆನ್ನಾಗಿರುತ್ತವೆ. ಲಿರಿಕ್ಸ್ ವಿಭಾಗದಲ್ಲಿ ನನ್ನನ್ನು ನಾಮಿನೇಟ್ ಮಾಡಲಾಗಿದೆ. ಸೈಮಾ ಎನ್ನುವುದು ಒಂದು ಸೆಲೆಬ್ರೆಷನ್ ಎಂದು ಸಂತಸ ಹಂಚಿಕೊಂಡರು.

ನಿಧಿ ಅಗರ್ವಾಲ್ ಮಾತನಾಡಿ, ನಾನು ಇಲ್ಲಿ ಭಾಗಿಯಾಗಿರುವುದು ಖುಷಿ ಕೊಟ್ಟಿದೆ. ಪ್ರತೀ ವರ್ಷ ನಡೆಯುವ ಸೈಮಾ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತಿದ್ದೇನೆ. ಸೈಮಾ ಎನ್ನುವುದು ಅಮೇಜಿಂಗ್ ಶೋ. ಸೈಮಾದಲ್ಲಿ ಎಲ್ಲರನ್ನೂ ನೋಡುವುದೇ ಖುಷಿ ಎಂದರು.

ಶಾನ್ವಿ ಶ್ರೀವಾಸ್ತವ್ ಮಾತನಾಡಿ, ಸೈಮಾ ಎನ್ನುವುದು ಹೋಳಿ, ದೀಪಾವಳಿ ಹಬ್ಬದಂತೆ. ಪ್ರತೀ ವರ್ಷದಂತೆ ಈ ಬಾರಿಯೂ ಸೈಮಾ ಮತ್ತೆ ಬಂದಿದೆ. ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದೇವೆ. ಎಲ್ಲಾ ಇಂಡಸ್ಟ್ರಿಯ ಸೆಲೆಬ್ರಿಟಿಗಳು ಒಂದೇ ಜಾಗದಲ್ಲಿ ಒಂದೇ ಸಮಾರಂಭದಲ್ಲಿ ಭಾಗಿಯಾಗಿ ಸಿನಿಮಾವನ್ನು ಸಂಭ್ರಮಿಸುತ್ತೇವೆ ಎಂದು ತಿಳಿಸಿದರು.

ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: ಪ್ರತಿಷ್ಠಿತ ಸೈಮಾ ಪ್ರಶಸ್ತಿಗೆ 'ಕಾಟೇರ', 'ಕ್ರಾಂತಿ' ಸೇರಿ ಕನ್ನಡ 5 ಸಿನಿಮಾಗಳು ನಾಮನಿರ್ದೇಶನ - SIIMA 2024

ತೆಲುಗಿನಲ್ಲಿ ನಾನಿ, ಕೀರ್ತಿ ಸುರೇಶ್ ಅಭಿನಯದ ಮತ್ತು ಶ್ರೀಕಾಂತ್ ಒಡೆಲಾ ನಿರ್ದೇಶನದ 'ದಸರಾ' ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ 'ಹಾಯ್ ನಾನ್ನಾ' 10 ವಿಭಾಗಗಳಲ್ಲಿ ನಾಮಿನೇಷನ್​ ಆಗಿವೆ. ತಮಿಳಿನಲ್ಲಿ ರಜನಿಕಾಂತ್ ಅಭಿನಯದ ಮತ್ತು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಜೈಲರ್ ಚಿತ್ರ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ಮಾಮಣ್ಣನ್‌ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಮಲಯಾಳಂನಲ್ಲಿ ಟೊವಿನೋ ಥಾಮಸ್, ಆಸಿಫ್ ಅಲಿ ಅಭಿನಯದ ಮತ್ತು ಜೂಡ್ ಆಂಥನಿ ಜೋಸೆಫ್ ನಿರ್ದೇಶನದ 2018 ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ಕಾತಲ್ – ದಿ ಕೋರ್ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: 'ನಿಮ್ಮ ಆಶೀರ್ವಾದದಿಂದ ನನ್ನ ಸೂಪರ್ ಸ್ಟಾರ್ ರಜನಿ ಸರ್ ಜೊತೆ ಅಭಿನಯಿಸುತ್ತಿದ್ದೇನೆ': ಉಪೇಂದ್ರ - Upendra in Rajinikanth Coolie movie

ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್‌ಬುಕ್ ಪುಟದಲ್ಲಿ ವೋಟ್ ಮಾಡಬಹುದಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.