ETV Bharat / entertainment

'ಕೋಟಿ' ಟ್ರೇಲರ್​​ಗೆ ಸಿನಿಪ್ರಿಯರು ಫಿದಾ: ಮುಂದಿನ ಶುಕ್ರವಾರ ಡಾಲಿ ಸಿನಿಮಾ ತೆರೆಗೆ - Kotee Trailer

ಬಹುನಿರೀಕ್ಷಿತ ಕನ್ನಡ ಚಿತ್ರ 'ಕೋಟಿ'ಯ ಅಧಿಕೃತ ಟ್ರೇಲರ್​​ ಅನಾವರಣಗೊಂಡಿದೆ.

Kotee movie team
'ಕೋಟಿ' ಚಿತ್ರತಂಡ (ETV Bharat)
author img

By ETV Bharat Karnataka Team

Published : Jun 6, 2024, 1:23 PM IST

ಕನ್ನಡ ಚಿತ್ರರಂಗದ ನಟರಾಕ್ಷಸ ಖ್ಯಾತಿಯ ಡಾಲಿ ಧನಂಜಯ್​​​​ ಮುಖ್ಯ ಭೂಮಿಕೆಯ ಮುಂದಿನ ಬಹು ನಿರೀಕ್ಷಿತ ಚಿತ್ರ ''ಕೋಟಿ''. ಪೋಸ್ಟರ್, ಟೀಸರ್, ಹಾಡುಗಳಿಂದಲೇ ಸ್ಯಾಂಡಲ್​​ವುಡ್​​ನಲ್ಲಿ ಸಖತ್​ ಕ್ರೇಜ್​ ಕ್ರಿಯೇಟ್​ ಮಾಡಿರುವ 'ಕೋಟಿ' ಚಿತ್ರದ ಆಫೀಶಿಯಲ್ ಟ್ರೇಲರ್ ಸರಿಗಮ ಕನ್ನಡ ಯೂಟ್ಯೂಬ್ ಚಾನಲ್​​​​​ನಲ್ಲಿ ಅನಾವರಣಗೊಂಡಿದೆ.

ನಾಯಕ ನಟ ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಾರಿಗೂ ಮೋಸ ಮಾಡದೇ, ನೋವು ನೀಡದೇ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಈತನದ್ದು. ಕೋಟಿ ಪಯಣದ ಒಂದು ಸಣ್ಣ ನೋಟವನ್ನು ಈ ಟ್ರೇಲರ್​​ ಒಳಗೊಂಡಿದೆ.

ಧನಂಜಯ್​​ ಸಾಮಾನ್ಯ ವ್ಯಕ್ತಿಯ ಗೆಟಪ್, ರಮೇಶ್ ಇಂದಿರಾ ಅವರ ನಟೋರಿಯಸ್ ವಿಲನ್ ಪಾತ್ರ, ತಾರಾ ಅವರ ತಾಯಿಯ ಪಾತ್ರ, ಕ್ವಾಲಿಟಿ ವಿಶುವಲ್ಸ್, ಮತ್ತೆ ಮತ್ತೆ ಕೇಳಬೇಕೆನಿಸುವ ಹಿನ್ನೆಲೆ ಸಂಗೀತ, ಹುಲಿವೇಷ ಈ ಟ್ರೇಲರ್​ನಲ್ಲಿ ಹೈಲೆಟ್ಸ್.

ನಟ ಡಾಲಿ ಧನಂಜಯ ಮಾತನಾಡಿ, "ಇದೊಂದು ಮಿಡಲ್ ಕ್ಲಾಸ್ ಸಾಮಾನ್ಯ ವ್ಯಕ್ತಿಯ ಕಥೆ. ಎಲ್ಲರಿಗೂ ಕನೆಕ್ಟ್ ಆಗುವ ಪ್ಯಾಮಿಲಿ ಎಂಟರ್​​ಟೈನರ್​​​" ಎಂದು ಹೇಳಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಪರಮ್ "ಇದೊಂದು ಕಂಟೆಂಟ್ ಇರುವ ಕಮರ್ಷಿಯಲ್ ಸಿನಿಮಾ. ಒಂದೊಳ್ಳೆ ಕಥೆ, ಒಳ್ಳೆ ಮನರಂಜನೆ ಗ್ಯಾರಂಟಿ'' ಎಂದು ಭರವಸೆ ನೀಡಿದರು.

ಅಪ್ಪಟ ಕನ್ನಡ ಮಣ್ಣಿನ ಕಥೆಯಾದ 'ಕೋಟಿ' ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೇ ಕಂಗೆಟ್ಟಿರುವ ಕನ್ನಡ ಸಿನಿಮಾ ಇಂಡಸ್ಟ್ರಿಗೆ 'ಕೋಟಿ' ಗೆಲ್ಲುವ ಭರವಸೆ ಮೂಡಿಸಿದೆ.

ಡಾಲಿ ಧನಂಜಯ್ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ, ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮೊದಲಾದವರು ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಇದನ್ನೂ ಓದಿ: ಮಂಡಿಯೂರಿ ಕುಳಿತು ಛಾಯಾಗ್ರಾಹಕನ ಫೋಟೋ ಕ್ಲಿಕ್ಕಿಸಿದ ನಟಿ ರಶ್ಮಿಕಾ ಮಂದಣ್ಣ: ವಿಡಿಯೋ ವೈರಲ್​​ - Rashmika Mandanna

ಚಿತ್ರದಲ್ಲಿ ಐದು ಹಾಡುಗಳಿದ್ದು, ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿ ಅವರು‌ 'ಕೋಟಿ'ಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಛಾಯಾಗ್ರಾಹಕ.

ಇದನ್ನೂ ಓದಿ: ಶಾರುಖ್​ ಒಡೆತನದ ಚಲನಚಿತ್ರ ನಿರ್ಮಾಣ ಸಂಸ್ಥೆ ಹೆಸರಲ್ಲಿ ಫೇಕ್​​ ಆಫರ್ ಲೆಟರ್​​: ಎಚ್ಚರ ವಹಿಸುವಂತೆ ಸೂಚನೆ - Red Chillies Entertainment

ಕೋಟಿ ಚಿತ್ರವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರೇಕ್ಷಕರನ್ನು ಗೆಲ್ಲುವ ವಿಶ್ವಾಸ ಚಿತ್ರ ತಂಡಕ್ಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.