ETV Bharat / entertainment

ಮನೆಯಿಂದ ಊಟ, ಹಾಸಿಗೆ, ಪುಸ್ತಕ ಒದಗಿಸಲು ಸೂಚಿಸುವಂತೆ ಕೋರಿ ದರ್ಶನ್ ಹೈಕೋರ್ಟ್‌ಗೆ ಅರ್ಜಿ - Darshan Plea For Home Meals

author img

By ETV Bharat Karnataka Team

Published : Jul 9, 2024, 2:29 PM IST

ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರು ಮನೆ ಊಟಕ್ಕೆ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Darshan
ನಟ ದರ್ಶನ್ ತೂಗುದೀಪ (ETV Bharat)

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರು ಮನೆ ಊಟಕ್ಕೆ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆಗೆ ಇನ್ನಷ್ಟೇ ದಿನ ನಿಗದಿಯಾಗಬೇಕಿದೆ.

ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಅರ್ಜಿದಾರರಿಗೆ ಸೂಕ್ತ ರೀತಿಯಲ್ಲಿ ಜೀರ್ಣವಾಗುತ್ತಿಲ್ಲ. ಹೀಗಾಗಿ ಕೆಲ ದಿನಗಳಿಂದ ಅತಿಸಾರ ಭೇದಿಯಿಂದ ಬಳಲುತ್ತಿದ್ದಾರೆ. ಜೈಲಿನ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದ್ದು, ಆಹಾರದಲ್ಲಿ ವಿಷಕಾರಿ ಸೂಕ್ಷ್ಮ ಜೀವಿಗಳು ಸೇರಿವೆ ಎಂದು ತಿಳಿಸಿದ್ದಾರೆ. ಜೊತೆಗೆ, ಅರ್ಜಿದಾರರು ತೂಕದಲ್ಲಿಯೂ ಕಡಿಮೆಯಾಗಿದ್ದಾರೆ. ಇದರಿಂದ ಕಾರಾಗೃಹದಲ್ಲಿ ವಿತರಣೆ ಮಾಡುತ್ತಿರುವ ಆಹಾರ ಸೇವನೆಗೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ, ಮನೆ ಆಹಾರ ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಬೇಕು ಎಂದು ಜೈಲು ಅಧಿಕಾರಿಗಳಿಗೆ ಈಗಾಗಲೇ ಮೌಖಿಕವಾಗಿ ಮನವಿ ಮಾಡಿದ್ದಾರೆ.

ಆದರೆ, ಅಧಿಕಾರಿಗಳು ಹೈಕೋರ್ಟ್ ಆದೇಶವಿಲ್ಲದೇ ಅರ್ಜಿದಾರರ ಕುಟುಂಬಸ್ಥರು ಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಒದಗಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿ ನಿರಾಕರಿಸಿದ್ದಾರೆ. ಅರ್ಜಿದಾರರು ದೊಡ್ಡ ಪ್ರಮಾಣದಲ್ಲಿ ತೂಕ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಅಲ್ಲದೇ, ಕರ್ನಾಟಕ ಬಂಧೀಖಾನೆ ಕಾಯ್ದೆ 1963 ಸೆಕ್ಷನ್ 30ರ ಪ್ರಕಾರ ವಿಚಾರಣಾಧೀನ ಕೈದಿಗಳು ಹೊರಗಿನಿಂದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆದುಕೊಳ್ಳುವುದಕ್ಕೆ ಅವಕಾಶವಿದೆ. ಜತೆಗೆ, ಅರ್ಜಿದಾರರು ಅಪರಾಧಿಯಾಗಿಲ್ಲ. ಹಾಗಾಗಿ, ಊಟ, ಹಾಸಿಗೆ, ಪುಸ್ತಕಗಳು ಮತ್ತು ಸುದ್ದಿಪತ್ರಿಕೆಗಳನ್ನು ಮನೆಯಿಂದ ತರಿಸಿಕೊಂಡಲ್ಲಿ ಸರ್ಕಾರದ ಖಜಾನೆಗೆ ಆಗುವ ವೆಚ್ಚವೂ ಕಡಿಮೆಯಾಗಲಿದೆ. ಅಲ್ಲದೇ, ಅರ್ಜಿದಾರರಿಗೆ ಮನೆ ಆಹಾರ ನೀಡದಿರುವ ಜೈಲು ಅಧಿಕಾರಿಗಳ ಕ್ರಮ ಅಮಾನವೀಯವಾಗಿದ್ದು, ಸಂವಿಧಾನದ ಪರಿಚ್ಛೇದ 21ರ ಬದುಕುವ ಹಕ್ಕು ಉಲ್ಲಂಘಿಸಿದಂತಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಜೈಲುವಾಸದ ಮಧ್ಯೆ 2005ರ ಮಾಸ್‌ ಹಿಟ್‌ 'ಶಾಸ್ತ್ರೀ' ಶುಕ್ರವಾರ ಮರು ಬಿಡುಗಡೆ - Shastri Re Release

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದು, ಮ್ಯಾಜಿಸ್ಟ್ರೇಟ್​​ ನ್ಯಾಯಾಲಯದ ಆದೇಶದಂತೆ 12 ದಿನಗಳ ಪೊಲೀಸ್ ವಿಚಾರಣೆ ಎದುರಿಸಿದ್ದಾರೆ. ಆ ಬಳಿಕ 2024ರ ಜೂನ್ 22ರಿಂದ ನ್ಯಾಯಾಂಗ ಬಂಧನಕ್ಕೆ ವಹಿಸಿದ್ದು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.