ETV Bharat / entertainment

'ಚೌಕಿದಾರ್' ಪೃಥ್ವಿ ಅಂಬಾರ್​ಗೆ ಜೋಡಿಯಾದ ದೊಡ್ಮನೆ ಚೆಲುವೆ ಧನ್ಯಾ ರಾಮ್​ಕುಮಾರ್ - Dhanya Ramkumar chowkidar movie - DHANYA RAMKUMAR CHOWKIDAR MOVIE

ಧನ್ಯಾ ರಾಮ್ ಕುಮಾರ್, ಪೃಥ್ವಿ ಅಂಬಾರ್​​ಗೆ ಜೋಡಿಯಾಗಿ 'ಚೌಕಿದಾರ್' ಚಿತ್ರದ ಭಾಗವಾಗಿದ್ದಾರೆ.

Dhanya Ramkumar
ನಟಿ ಧನ್ಯಾ ರಾಮ್​ಕುಮಾರ್ (ETV Bharat)
author img

By ETV Bharat Karnataka Team

Published : Jun 28, 2024, 2:12 PM IST

ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ 'ಚೌಕಿದಾರ್'. ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್​ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ ಧನ್ಯಾ ರಾಮ್ ಕುಮಾರ್, ಪೃಥ್ವಿ ಅಂಬಾರ್​​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.

ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯಾ ರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಪರಿಚಯಿತರಾಗಿದ್ದ ಧನ್ಯಾ ಇತ್ತೀಚೆಗಷ್ಟೇ ದಿ ಜಡ್ಜ್​​​ಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಸದ್ಯ ಕಾಲಪತ್ತರ್ ಬಿಡುಗಡೆಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿಯೀಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ಡಿಎಂಕೆ ಸರ್ಕಾರದ ವಿರುದ್ಧ ದಳಪತಿ ವಿಜಯ್​ ವಾಗ್ದಾಳಿ.. ಯಾವ ಕಾರಣಕ್ಕೆ ಟೀಕೆ ಗೊತ್ತಾ? - Vijay Slams DMK govt

'ಚೌಕಿದಾರ್' ಬಹುಭಾಷೆಯಲ್ಲಿ ಮೂಡಿ ಬರಲಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆ್ಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕಾ ಫ್ಯಾಮಿಲಿ ಎಂಟರ್​​ಟೈನರ್.

ಇದನ್ನೂ ಓದಿ: 'ಮೆಜೆಸ್ಟಿಕ್ 2'ನಲ್ಲಿ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್; ಶೃತಿ ಜೊತೆ ಕ್ಲೈಮ್ಯಾಕ್ಸ್ ಶೂಟಿಂಗ್​ - Majestic 2

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ 3ರಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಸಿನಿಮಾದ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.