ETV Bharat / entertainment

ಕನ್ನಡದಲ್ಲಿ ಬರಲಿದೆ ಅಯೋಧ್ಯೆ ರಾಮ ಮಂದಿರ ಕುರಿತ ಬಯೋಪಿಕ್ - ayodhya ram mandir biopic - AYODHYA RAM MANDIR BIOPIC

ಅಯೋಧ್ಯೆಯ ಶ್ರೀರಾಮ ಮಂದಿರದ ಬಯೋಪಿಕ್ಅನ್ನು ಸಿನಿಮಾ ರೂಪದಲ್ಲಿ ತರಲು ನಿರ್ದೇಶಕ ಶ್ರೀನಿವಾಸರಾಜು ಮುಂದಾಗಿದ್ದಾರೆ.

director-srinivas-raju-will-make-a-biopic-of-ayodhya-ram-mandir-in-kannada
ಕನ್ನಡದಲ್ಲಿ ಬರಲಿದೆ ಅಯೋಧ್ಯೆ ರಾಮ ಮಂದಿರ ಕುರಿತ ಬಯೋಪಿಕ್!
author img

By ETV Bharat Karnataka Team

Published : Apr 17, 2024, 5:54 PM IST

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯಾದ ಮಹಾಪರ್ವ ಕಾಲವಿದು. ಆದರೆ ಶ್ರೀರಾಮ ತನ್ನ ಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಯಾಗಲು 500 ವರ್ಷ ಕಾಯಬೇಕಾಯಿತು. 1528ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣವಾಯಿತು. ಆನಂತರ ಆ ಜಾಗದಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಬೇಕೆಂದು ಸಾಕಷ್ಟು ಹೋರಾಟಗಳು‌ ನಡೆದವು. ಈ ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು. ನೂರಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದಾದರೂ ಒಂದು ಕೇಸ್ ಕೋರ್ಟ್ ನಲ್ಲಿ ನಡೆದಿದ್ದರೆ ಅದು ಶ್ರೀರಾಮ ಜನ್ಮಭೂಮಿಯದ್ದೇ ಇರಬಹುದು. ಕೊನೆಗೂ 2019 ರಲ್ಲಿ ನ್ಯಾಯಾಲಯ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿತ್ತು. 2024 ರ ಜನವರಿಯಲ್ಲಿ ಅದ್ಧೂರಿಯಾಗಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಯಿತು. ಕೋಟ್ಯಂತರ ಜನರ ಕನಸು ನನಸಾಯ್ತು.

ಈ ಅಯೋಧ್ಯೆಯ ಶ್ರೀರಾಮ ಮಂದಿರದ ಬಯೋಪಿಕ್ ಅನ್ನು ಸಿನಿಮಾ ರೂಪದಲ್ಲಿ ತರಲು ನಿರ್ದೇಶಕ ಶ್ರೀನಿವಾಸರಾಜು ಮುಂದಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಇನ್ನೂ ನಿಗದಿಯಾಗಿಲ್ಲ. ಆದರೆ "ಸತ್ಯಂ ಶಿವಂ ಸುಂದರಂ" ಎಂಬ ಟ್ಯಾಗ್ ಲೈನ್ ಅಂತಿಮವಾಗಿದೆ. ಗಣೇಶ ನಟನೆಯ ಕೃಷ್ಣಂ ಪ್ರಣಯ ಸಖಿ ಸಿನಿಮಾ ನಿರ್ಮಾಣ ಮಾಡಿರುವ ಪ್ರಶಾಂತ್ ರುದ್ರಪ್ಪ, ತಮ್ಮದೇ ಆದ ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್‌ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಶ್ರೀನಿವಾಸರಾಜು, ಸಾಮಾನ್ಯವಾಗಿ ಮನುಷ್ಯರ ಬಯೋಪಿಕ್ ಸಿನಿಮಾ ರೂಪದಲ್ಲಿ ತೆರೆಕಂಡ ಉದಾಹರಣಗಳಿವೆ. ಆದರೆ, ದೇವಸ್ಥಾನವೊಂದರ ಬಯೋಪಿಕ್ ಇರುವುದು ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಮಾತ್ರ ಎನ್ನುವುದು ನನ್ನ ಅಭಿಪ್ರಾಯ. ಈ ಮೂಲಕ 500 ವರ್ಷಗಳ ಇತಿಹಾಸವನ್ನು ತೆರಯ ಮೇಲೆ ತರಲು ಪ್ರಯತ್ನ ಮಾಡುತ್ತಿದ್ದೇನೆ ಎನ್ನುತ್ತಾರೆ. ಕನ್ನಡದಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಬಾಬರಿ ಮಸೀದಿಗೂ ಮೊದಲು ರಾಜಾ ವಿಕ್ರಮಾದಿತ್ಯ ಪ್ರತಿಷ್ಠಾಪಿಸಿದ ಶ್ರೀರಾಮ ಮಂದಿರದಿಂದ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ರಾಮಾಯಣದ ಅಂಶವೂ ಈ ಸಿನಿಮಾದಲ್ಲಿ ಇರಲಿದೆ. ಹಾಗೆಂದ ಮಾತ್ರಕ್ಕೆ ಇದು ಪೂರ್ತಿ ರಾಮಾಯಣದ್ದೇ ಸಿನಿಮಾ ಅಲ್ಲ ಎಂದಿದ್ದಾರೆ.

ದಶರಥ, ರಾಮ, ಸೀತಾ, ಹನುಮಂತ, ವಾಲಿ ಹಾಗೂ ವಾಲ್ಮೀಕಿ ಈ ಆರು ಪಾತ್ರಗಳು ಮಾತ್ರ ಇರುತ್ತದೆ. ತುಳಿಸಿದಾಸರ ಜೀವನವೂ ಈ ಸಿನಿಮಾದಲ್ಲಿರಲಿದೆ. ರಘುಪತಿ ರಾಘವನ ಆದರ್ಶಗಳನ್ನು ಈ ಚಿತ್ರದಲ್ಲಿ ಕಾಣಬಹುದು. ಸತ್ಯಂ ಶಿವಂ ಸುಂದರಂ ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಮೂರು ಭಾಗಗಳಲ್ಲಿ ಚಿತ್ರ ಬರಲಿದೆ. ಈ ಬಯೋಪಿಕ್‌ಗೆ ಇನ್ನೂ ಶೀರ್ಷಿಕೆ ನಿಗದಿಯಾಗಿಲ್ಲ. ಸಿನಿಮಾ ನಿರೀಕ್ಷೆಗೂ ಮೀರಿ ಅದ್ಧೂರಿಯಾಗಿರಲಿದೆ. ದೇಶದ ವಿವಿಧ ಸಿನಿಮಾರಂಗದ ಖ್ಯಾತ ನಾಮ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದ ಭಾಗವಾಗಲಿದ್ದಾರೆ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಶ್ರೀರಾಮನವಮಿಯ ಈ ದಿನದಂದು ಇದಿಷ್ಟು ಮಾಹಿತಿ ರಿವೀಲ್‌ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಚಿತ್ರದ ಶೀರ್ಷಿಕೆ ಸೇರಿದಂತೆ ಹೆಚ್ಚಿನ ಮಾಹಿತಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಡಾಲಿ 'ಉತ್ತರಕಾಂಡ' ಅಡ್ಡಕ್ಕೆ ಬಂದ ಬೋಲ್ಡ್ ಹುಡುಗಿ - Uttarakaanda Movie

ETV Bharat Logo

Copyright © 2025 Ushodaya Enterprises Pvt. Ltd., All Rights Reserved.